ರಾಜ್ಯದ ವಿವಿಧೆಡೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗೆ ಸೋಮವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಅದಲ್ಲದೆ ಉಡುಪಿ ಸೇರಿದಂತೆ ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕೂಡಾ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ ರಾಯಚೂರು, ದಾವಣಗೆರೆ, ಚಿಕ್ಕಮಗಳೂರಿಗೆ ‘ಯೆಲ್ಲೊ ಅಲರ್ಟ್’ ಘೋಷನೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆ, ಜತೆಗೆ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅದೇ ಕರಾವಳಿಯಲ್ಲಿ ಗಾಳಿಯ ವೇಗವು 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಯಾವುದೇ ಕಾರಣಕ್ಕೂಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಉಳಿದಂತೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಅಲ್ಲದೆ ಮಂಗಳವಾರವು ಕೂಡಾ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ನೀಡಲಾಗಿದೆ. ಕೊಪ್ಪಳ,ಹಾವೇರಿ ಹಾಗೂ ಗದಗಕ್ಕೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಅಲ್ಲದೆ ಜೂನ್ 14 ರವರೆಗೂ ರಾಜ್ಯದ ವಿವಿಧೆಡೆ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


