ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ ಹಿನ್ನೆಲೆ ನಿನ್ನೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಮೈತ್ರಿ ಪಕ್ಷಗಳ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದರು. ಈ ವೇಳೆ ರಸ್ತೆ ಮೇಲೆ ನಿಂತಿದ್ದ ಇಬ್ಬರಿಗೆ ಚೂರಿ ಇರಿಯಲಾಗಿದೆ.
ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದೆ. ಬೋಳಿಯಾರು ನಿವಾಸಿಗಳಾದ ಸುರೇಶ್ ಹಾಗೂ ನಂದ ಕುಮಾರ್‌ಗೆ ಚೂರಿ ಇರಿಯಲಾಗಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್‌ನಲ್ಲಿ ವಿಜಯೋತ್ಸವ ಆಯೋಜಿಸವಾಗಿತ್ತು.
ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ಬಂದ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಯುವಕರ ಮೇಲೆ ಅಟ್ಯಾಕ್ ನಡೆದಿದೆ. ಈ ವೇಳೆ ಇಬ್ಬರೂ ಗಾಯಗೊಂಡಿದ್ದು, ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


