ಮೈಸೂರು ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಆಸ್ತಿ ವಿಚಾರದಲ್ಲಿ ಇದ್ದ ತಕರಾರು ಕಾರಣ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ನಜರ್ಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ರವಿ (60) ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಆತ, ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


