ಹೊಸಕೋಟೆ: ಬಟ್ಟೆ ಒಣ ಹಾಕಲು ಹೋದ ಬಾಲಕನಿಗೆ ವಿದ್ಯುತ್ ಶಾಕ್ ನಿಂದ ಬಾಲಕ ಮೃತಪಟ್ಟಿರುವ ಘಟನೆ ಹೊಸಕೋಟೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಸಾಯಿಭುವನ್ ಮೃತ ಬಾಲಕನಾಗಿದ್ದಾನೆ.
ಬೆಳಗ್ಗೆ ಹಾಸ್ಟೆಲ್ ಮಹಡಿ ಮೇಲೆ ಬಟ್ಟೆ ಒಣ ಹಾಕಲು ಹೋದಾಗ ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದು, ಮೃತ ವಿದ್ಯಾರ್ಥಿ ಹೊಸಕೋಟೆ ತಾಲೂಕಿನ ಸೂಲಿಬೆಲೆ ನಿವಾಸಿ ಎನ್ನಲಾಗಿದೆ.
ಬಾಲಕನ ಸಾವಿಗೆ ವಿದ್ಯಾರ್ಥಿನಿಲಯದ ವಾರ್ಡನ್, ಸಮಾಜ ಕಲ್ಯಾಣ ಇಲಾಖೆ ಮತ್ತು ಬೆಸ್ಕಾಂ ಅಧಿಕಾರಿಗಳು ಸುರಕ್ಷತಾ ಕ್ರಮ ಕೈಗೊಳ್ಳದೆ ಇರುವುದು ಕಾರಣ ಎಂದು ಪೋಷಕರು ಆರೋಪಿಸಿದ್ದು, ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


