ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕರೋನವೈರಸ್ ಸೋಂಕಿನಿಂದ, ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭಾ ಚುನಾವಣೆಗಳನ್ನು ಮುಂದೂಡುವ ಸಾಧ್ಯತೆಯಿದೆ.
ಕರೋನಾ ಪರಿಸ್ಥಿತಿಯ ಬಗ್ಗೆ ಭಾರತದ ಚುನಾವಣಾ ಆಯೋಗವು (ಇಸಿಐ) ಕಳವಳ ವ್ಯಕ್ತಪಡಿಸಿದೆ. ಪರಿಸ್ಥಿತಿಯನ್ನು ಅವಲೋಕಿಸಲು ಆಯೋಗವು ಡಿಸೆಂಬರ್ 27 ಸೋಮವಾರ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳೊಂದಿಗೆ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೂಡ ಉಪಸ್ಥಿತರಿರುವರು.
ಮೂರು ದಿನಗಳ ಹಿಂದೆ, ಕರೋನಾ ಪರಿಸ್ಥಿತಿಯನ್ನು ನೋಡಿದ ಅಲಹಾಬಾದ್ ಹೈಕೋರ್ಟ್, ಸದ್ಯಕ್ಕೆ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಮನವಿ ಮಾಡಿತು.
ಇದರ ನಂತರ, ಮುಖ್ಯ ಚುನಾವಣಾ ಆಯುಕ್ತರು ಮುಂದಿನ ವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಘೋಷಿಸಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy