ಬೆಂಗಳೂರು: ಬೆಂಗಳೂರಲ್ಲಿ ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ಮೊದಲು ಬೆಳಗ್ಗೆ 5ರಿಂದ ಬೆಳಗ್ಗೆ 10ರ ತನಕ ಪಾರ್ಕ್ ಗಳನ್ನು ಓಪನ್ ಮಾಡಲಾಗುತ್ತಿತ್ತು, ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಆದರೆ ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ತೋಟಗಾರಿಕೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್ ಗಳಿಗೆ ಈ ಅವಧಿ ವಿಸ್ತರಣೆ ಅನ್ವಯ ಆಗುವುದಿಲ್ಲ ಎಂದರು. ಪಾರ್ಕ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಕಿದ್ದೇನೆ, ಸಾರ್ವಜನಿಕರಿಗೆ ಎಲ್ಲಾ ರೀತಿಯ ಸುರಕ್ಷಿತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


