ನವದೆಹಲಿ: ಅನ್ನಪೂರ್ಣ ದೇವಿ ಅವರು ಇಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮುನ್ನ, 55 ವರ್ಷದ ದೇವಿ ಅವರು ಮಾಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸ್ಮೃತಿ ಇರಾನಿ ಅವರನ್ನು ಅವರ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾರ್ಗದರ್ಶನ ಪಡೆದಿದ್ದೇನೆ. ಸ್ಮೃತಿ ಅವರು ನೀಡಿದ ಪ್ರೀತಿಯ ಸ್ವಾಗತ ಆತ್ಮೀಯವಾಗಿತ್ತು. ಅವರ ಸ್ಫೂರ್ತಿದಾಯಕ ಮಾರ್ಗದರ್ಶನವು ನನಗೆ ಬೆಳಕಿನ ಕಿರಣದಂತೆ ಯಾವಾಗಲೂ ಉಪಯುಕ್ತವಾಗಿರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ಕನಸನ್ನು ನನಸಾಗಿಸಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


