ಮರದ ಕೊಂಬೆ ಕಡಿಯುವಾಗ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಯ ಶಾಕ್ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಚಂದ್ರಪ್ಪ (45) ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ಸಿಲ್ವರ್ ಮರದ ಕೊಂಬೆಗಳನ್ನು ಕತ್ತರಿಸುವಾಗ ಘಟನೆ ನಡೆದಿದೆ. ಸಿಲ್ವರ್ ಮರದ ಮಧ್ಯೆ ವಿದ್ಯುತ್ ತಂತಿ ಹಾದು ಹೋಗಿತ್ತು. ಆದರೆ ವಿದ್ಯುತ್ ತಂತಿಯನ್ನು ಗಮನಿಸದೇ ಮರದ ಕೊಂಬೆ ಕಡಿಯುತ್ತಿರುವಾಗ ವಿದ್ಯುತ್ ಪ್ರವಹಿಸಿ ಮರದಲ್ಲೇ ಚಂದ್ರಪ್ಪ ಸಾವನ್ನಪ್ಪಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


