ಬೆಳಗಾವಿ: ಬೆಳಗಾವಿಯ ಜಿಲ್ಲಾ ಕೋರ್ಟ್ ನಲ್ಲಿ ವ್ಯಕ್ತಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದಂತೆ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಆರೋಪಿ ಜಯೇಶ್ ಪೂಜಾರಿಗೆ ಧರ್ಮದೇಟು ನೀಡಿದ್ದಾರೆ.
ಕೂಡಲೆ ಆರೋಪಿ ಜಯೇಶ್ ನನ್ನು ರಕ್ಷಿಸಿ ಪೊಲೀಸರು ಆತನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಆರೋಪಿ ಜಯೇಶ್ ಪೂಜಾರಿ ಪೂಜಾರಿ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿಗೂ ಜೀವ ಬೆದರಿಕೆ ಮಾಡಿದ್ದ ಎನ್ನಲಾಗುತ್ತಿದ್ದು, ಹಿಂಡಲಗಾ ಜೈಲಿನಿಂದಲೇ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗುತ್ತಿದೆ.
ಅಲೋಕ್ ಕುಮಾರ್ ಅವರಿಗೆ ಜೈಲಿನಿಂದಲೇ ಕರೆಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಾಣೆಗಾಗಿ ಪೊಲೀಸರು ನ್ಯಾಯಾಲಯಕ್ಕೆ ಕರೆ ತಂದಾಗ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296