ತುಮಕೂರು: ಇಂದು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಸ್ವಾಗತಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಅವರು ಸೇರಿದಂತೆ ಯಾವೊಬ್ಬ ಹಿರಿಯ ಅಧಿಕಾರಿಗಳು ಬಾರದೆ ಇರುವುದಕ್ಕೆ, ಸಚಿವ ಸೋಮಣ್ಣ ದೂರವಾಣಿ ಮೂಲಕ ಏರು ಧ್ವನಿಯಲ್ಲಿ ಮಾತನಾಡಿದ ಘಟನೆ ನಡೆದಿದೆ.
ಕೇಂದ್ರ ಸಚಿವ ಸೋಮಣ್ಣ ಇಂದು ಮೊದಲಿಗೆ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಸಂದರ್ಭದಲ್ಲಿ ಯಾವೊಬ್ಬ ಅಧಿಕಾರಿಗಳು ಕೂಡ ಹಾಜರಿರಲಿಲ್ಲ ನಂತರ ಅಲ್ಲಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬಂದಿದ್ದ ಸೋಮಣ್ಣ ಅವರಿಗೆ ಮಾಹಿತಿ ನೀಡಲು ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಶಾಸ್ತ್ರ ಚಿಕಿತ್ಸಕರು ಕೂಡ ಹಾಜರಿರಲಿಲ್ಲ.
ಇತ್ತೀಚಿಗೆ ಪಾವಗಡ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದರು. ಅಲ್ಲದೆ, ಇನ್ನೂ 10 ಮಂದಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರುಗಳ ಆರೋಗ್ಯವನ್ನು ವಿಚಾರಿಸಲು ಕೇಂದ್ರ ಸಚಿವ ಸೋಮಣ್ಣ ಆಗಮಿಸಿದ್ದರು. ಆದರೆ ಅಲ್ಲಿಯೂ ಕೂಡ ಅಧಿಕಾರಿಗಳು ಇಲ್ಲದಿದ್ದನ್ನು ಕಂಡು ಕೆಂಡಮಂಡಲರಾದ ಸಚಿವ ಸೋಮಣ್ಣ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿ ಇ ಓ ಅವರಿಗೆ ಮಾತನಾಡಿ ತೀವ್ರ ತರಾಟೆಗೆ ತೆಗೆದುಕೊಂಡರು.
ಕೇವಲ ರಾಜ್ಯ ಸರ್ಕಾರ ಸೀಮಿತವೇ ಕೇಂದ್ರ ಸರ್ಕಾರ ನಿಮಗೆ ಲೆಕ್ಕಕ್ಕೆ ಇಲ್ಲವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿ ಶುಭಕಲ್ಯಾಣ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಇಂದು ಸಂಜೆಯೊಳಗೆ ನನಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


