ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath ) ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ಜೂನ್ 17ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಮುಸ್ಲಿಮರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ.
ನಿಷೇಧ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಬಲಿ ಕೊಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಕ್ರೀದ್‌ನಲ್ಲಿ ಬಲಿದಾನ ಮಾಡುವ ಸ್ಥಳವನ್ನು ಮೊದಲೇ ಗುರುತಿಸಬೇಕು. ಇತರ ಸ್ಥಳಗಳಲ್ಲಿ ಬಲಿದಾನ ಮಾಡಬಾರದು ಹಾಗೂ ವಿವಾದಿತ ಸ್ಥಳಗಳಲ್ಲಿ ಬಲಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.
ರಸ್ತೆಗಳನ್ನು ಬಂದ್ ಮಾಡಿ ಪ್ರಾರ್ಥನೆ ಮಾಡಬಾರದು. ನಂಬಿಕೆಯನ್ನು ಗೌರವಿಸಿ ಆದರೆ ಯಾವುದೇ ಹೊಸ ಸಂಪ್ರದಾಯವನ್ನು ಪ್ರೋತ್ಸಾಹಿಸಬೇಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA