nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಮೂರು ವರ್ಷಗಳಲ್ಲಿ 672 ಮಕ್ಕಳ ರಕ್ಷಣೆ; ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಿಲ್ಲಾಡಳಿತದ ಕ್ರಮ

    April 28, 2026

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಮೂರು ವರ್ಷಗಳಲ್ಲಿ 672 ಮಕ್ಕಳ ರಕ್ಷಣೆ; ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಿಲ್ಲಾಡಳಿತದ ಕ್ರಮ
    • ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ
    • ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಂಚನೆ, ಜೀವ ಬೆದರಿಕೆ ಆರೋಪದಡಿ ಕೇಂದ್ರ ಸಚಿವ ಸೋಮಣ್ಣ ಪುತ್ರ ಸೇರಿ ಮೂವರ ವಿರುದ್ಧ ಎಫ್‍ ಐಆರ್
    ರಾಜ್ಯ ಸುದ್ದಿ June 15, 2024

    ವಂಚನೆ, ಜೀವ ಬೆದರಿಕೆ ಆರೋಪದಡಿ ಕೇಂದ್ರ ಸಚಿವ ಸೋಮಣ್ಣ ಪುತ್ರ ಸೇರಿ ಮೂವರ ವಿರುದ್ಧ ಎಫ್‍ ಐಆರ್

    By adminJune 15, 2024No Comments2 Mins Read
    somanna

    ಇವೆಂಟ್ ಮ್ಯಾನೇಜ್‌ ಮೆಂಟ್ ಕಂಪೆನಿಗೆ ವಂಚಿಸಿ, ಜೀವ ಬೆದರಿಕೆ ಹಾಕಿರುವ ಆರೋಪದಡಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣರ ಪುತ್ರ ಅರುಣ್ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್‍ ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.

    ಈ ಕುರಿತು ತೃಪ್ತಿ ಹೆಗಡೆ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಅರ್ಜಿಯ ವಿಚಾರಣೆ ನಡೆಸಿದ ನಗರದ 37ನೇ ಎಸಿಎಂಎಂ ನ್ಯಾಯಾಲಯ ತನಿಖೆ ನಡೆಸುವಂತೆ ಆದೇಶಿಸಿತ್ತು.


    Provided by
    Provided by

    ಅದರನ್ವಯ ಅರುಣ್ ಸೋಮಣ್ಣ, ಜೀವನ್ ಕುಮಾರ್ ಹಾಗೂ ಪ್ರಮೋದ್ ರಾವ್ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 506, 34, 504, 387, 420, 477ಂ, 323, 327,347 ಹಾಗೂ 354 (ದೈಹಿಕ ಹಿಂಸೆ, ಅವಮಾನ, ಜೀವಭಯ, ವಂಚನೆ, ಅಪಹರಣ) ಸೇರಿದಂತೆ ಮತ್ತಿತರ ಆರೋಪಗಳಡಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ದೂರಿನ ವಿವರ: ದೂರುದಾರೆಯಾದ ತೃಪ್ತಿ ಹೆಗಡೆ ಹಾಗೂ ಮಧ್ವರಾಜ್ ಎಂಬುವರು ಸುಮಾರು 23 ವರ್ಷಗಳಿಂದ ಇವೆಂಟ್ ಮ್ಯಾನೇಜ್‌ ಮೆಂಟ್ ಕಂಪೆನಿ ನಡೆಸುತ್ತಿದ್ದು, 2013ರಲ್ಲಿ ಸರಕಾರಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾಗ ಸಚಿವ ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಅವರ ಪರಿಚಯವಾಗಿತ್ತು. 2017ರಲ್ಲಿ ಅರುಣ್ ಸೋಮಣ್ಣ ಪುತ್ರಿಯ ಹುಟ್ಟುಹಬ್ಬದ ಕಾರ್ಯಕ್ರಮ ಆಯೋಜಿಸುವ ಜವಾಬ್ದಾರಿಯನ್ನು ಮಧ್ವರಾಜ್ ಒಡೆತನದ ಇವೆಂಟ್ ಮ್ಯಾನೇಜ್‌ ಮೆಂಟ್ ಕಂಪೆನಿಯೇ ನಿರ್ವಹಿಸಿತ್ತು.

    ಉತ್ತಮ ಬಾಂಧವ್ಯ ಇದ್ದಿದ್ದರಿಂದ ಅರುಣ್ ಸೋಮಣ್ಣ ಅವರ ಸಲಹೆ ಮೇರೆಗೆ 2019ರಲ್ಲಿ ಅರುಣ್ ಮತ್ತು ಮಧ್ವರಾಜ್ ಜಂಟಿಯಾಗಿ ನೈಬರ್ ಹುಡ್ ಎಂಬ ಇವೆಂಟ್ ಮ್ಯಾನೇಜ್‌ ಮೆಂಟ್ ಕಂಪೆನಿಯನ್ನು ಪಾರ್ಟನರ್‍ಶಿಪ್ ಡೀಡ್ ಆಧಾರದಲ್ಲಿ ಆರಂಭಿಸಿದ್ದರು.

    ಕಂಪೆನಿಯಲ್ಲಿ ಮಧ್ವರಾಜ್ ಹೂಡಿಕೆ ಮಾಡಿರದ ಕಾರಣ, ಹೂಡಿಕೆ ಹಾಗೂ ಪಾವತಿಯ ಜವಾಬ್ದಾರಿಯನ್ನು ಅರುಣ್ ಸೋಮಣ್ಣ ಅವರೇ ವಹಿಸಿಕೊಂಡಿದ್ದರು. ನಂತರ ವ್ಯವಹಾರದಲ್ಲಿ ನಷ್ಟವಾದಾಗ ಮಧ್ವರಾಜ್ ಅವರು ಅರುಣ್ ಬಳಿ ವಿಚಾರಿಸಿದಾಗ ಯಾವುದೇ ಮಾಹಿತಿ ನೀಡಲಿಲ್ಲ. ಇದಾದ ಬಳಿಕ ಅರುಣ್ ಅವರು ಮಧ್ವರಾಜ್ ಅವರನ್ನು ಕಂಪೆನಿಯ ಪಾಲುದಾರಿಕೆಗೆ ರಾಜೀನಾಮೆ ಕೊಡುವಂತೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಅಲ್ಲದೆ, ಕಂಪೆನಿಗೆ ಹೊಸ ಪಾಲುದಾರರನ್ನು ಸೇರ್ಪಡೆ ಮಾಡಿಕೊಂಡು, ಮಧ್ವರಾಜ್ ಮತ್ತು ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ. ಕಂಪೆನಿಯಲ್ಲಿ ಮಧ್ವರಾಜ್ ಅವರ ಲಾಭಾಂಶದ ಪ್ರಮಾಣವನ್ನು ಶೇ.30ರಿಂದ ಶೇ.10ಕ್ಕೆ ಇಳಿಕೆ ಮಾಡಲಾಗಿತ್ತು. ಕಂಪೆನಿಯ ಕಚೇರಿ ಇರುವ ಜಾಗದ ಲೀಸ್ ಅಗ್ರಿಮೆಂಟ್ ಬದಲಾವಣೆ, ನಕಲಿ ದಾಖಲೆ ಬಳಸಿ ನೋಂದಣಿ ಹೀಗೆ ಹಲವು ಅಕ್ರಮಗಳನ್ನು ಎಸಗಲಾಗಿದೆ. ಗೂಂಡಾಗಳನ್ನು ಬಿಟ್ಟು ಮಧ್ವರಾಜ್ ಅವರನ್ನ ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ, ಚಿತ್ರಹಿಂಸೆ ನೀಡಲಾಗಿದೆ ಎಂದು ತೃಪ್ತಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಮೂರು ವರ್ಷಗಳಲ್ಲಿ 672 ಮಕ್ಕಳ ರಕ್ಷಣೆ; ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಿಲ್ಲಾಡಳಿತದ ಕ್ರಮ

    April 28, 2026

    ತುಮಕೂರು: ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪೋಕ್ಸೋ ಪ್ರಕರಣದ ಸಂತ್ರಸ್ತರು, ಬಾಲ್ಯ ವಿವಾಹದ ಸಂಕೋಲೆಯಲ್ಲಿ ಸಿಲುಕಿದ್ದವರು ಹಾಗೂ ಬಾಲ ಕಾರ್ಮಿಕರಾಗಿ…

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.