ತನ್ನ ಸಹೋದರಿಗಾಗಿ ವ್ಯಕ್ತಿಯೊಬ್ಬರು ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಐಸ್ ಕ್ರೀಮ್ ನಲ್ಲಿ ಮನುಷ್ಯನ ಕೈಬೆರಳು ಪತ್ತೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಮಲಾಡ್ ನ ಡಾ.ಸೆರಾವೊ ಎಂಬ ವ್ಯಕ್ತಿ, ಆನ್ ಲೈನ್ ನಲ್ಲಿ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು. ಈ ವೇಳೆ ಅವರ ಸಹೋದರಿಗಾಗಿ ಐಸ್ ಕ್ರೀಮ್ ಅನ್ನೂ ಆರ್ಡರ್ ಮಾಡಿದ್ದರು. ಬಳಿಕ ಆರ್ಡರ್ ಮಾಡಿದ್ದ ಐಸ್ ಕ್ರೀಮ್ ಬರುತ್ತಿದ್ದಂತೆ ಓಪನ್ ಮಾಡಿದ್ದಾರೆ.
ಈ ವೇಳೆ, ಅವರಿಗೆ ಬೆರಳು ನಟ್ಸ್ ರೀತಿ ಕಾಣಿಸಿಕೊಂಡಿದೆ. ಬಳಿಕ ಅದು ಮನುಷ್ಯನ ಕೈ ಬೆರಳು ಎಂಬುದು ಅವರ ಅರಿವಿಗೆ ಬಂದಿದೆ. ಆನ್ ಲೈನ್ ನಲ್ಲಿ ಹಂಚಿಕೊಳ್ಳಲಾದ ಫೋಟೋದಲ್ಲಿ ಐಸ್ ಕ್ರೀಮ್ ನಲ್ಲಿ ಕೈಬೆರಳಿರುವುದು ಕಾಣಿಸುತ್ತದೆ.
ಈ ಬಗ್ಗೆ ಸೆರಾವೊ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಐಸ್ ಕ್ರೀಮ್ ನ್ನು ಮತ್ತು ಬೆರಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ರೀತಿ ಕೈ ಬೆರಳು ಪತ್ತೆಯಾಗಿರುವುದು ದೊಡ್ಡ ಅಪರಾಧದ ಶಂಕೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA