ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ. ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಆಕಾಶ್ (13) ಮೃತ ದುರ್ದೈವಿ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.
ನೇರಳೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು ಮರದಿಂದ ಜಾರಿ ಬೀಳುವಾಗ ವಿದ್ಯುತ್ ತಂತಿ ಹಿಡಿದ ಬಾಲಕ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದಿದ್ದಾನೆ. ಬಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA