ನವದೆಹಲಿ: ಕರಾಳ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿತರಾಗಿರುವ ಮುಸ್ಲಿಮರು, ಆದಿವಾಸಿಗಳು ಮತ್ತು ದಲಿತರ ಭವಿಷ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಆಲ್ ಇಂಡಿಯಾ ಮಜ್ಲಿಸೆ ಇತ್ತಿಹಾದುಲ್ ಮುಸ್ಲಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಈ ಚುನಾವಣಾ ಫಲಿತಾಂಶದಿಂದಲೂ ಮೋದಿ ಸರ್ಕಾರ ಪಾಠ ಕಲಿತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ ಫಲಿತಾಂಶದಿಂದ ಪಾಠ ಕಲಿಯುತ್ತಾರೆ ಎಂಬ ನಿರೀಕ್ಷೆ ನನಗಿತ್ತು. ಆದರೆ ಇದಕ್ಕೆ ತಣ್ಣೀರೆರಚಿದ್ದಾರೆ” ಎಂದು ಹೈದರಾಬಾದ್ ಸಂಸದ ಶನಿವಾರ ಅಭಿಪ್ರಾಯಪಟ್ಟರು.
“ಯುಎಪಿಎ ಕಾನೂನು ಇಂದು ಮತ್ತೆ ಸುದ್ದಿಯಲ್ಲಿದೆ. ಇದು ಅತ್ಯಂತ ನಿರ್ದಯ ಕಾನೂನು ಆಗಿದ್ದು, ಇದರಡಿ ಸಾವಿರಾರು ಮಂದಿ ಮುಸ್ಲಿಮರು, ದಲಿತರು ಮತ್ತು ಆದಿವಾಸಿಗಳನ್ನು ಜೈಲಿಗೆ ಕಳುಹಿಸಲಾಗಿದ್ದು, ಅವರ ಬದುಕು ನಾಶವಾಗಿದೆ” ಎಂದು ಓವೈಸಿ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ.
85 ವರ್ಷದ ಸ್ಟ್ಯಾನ್ ಸ್ವಾಮಿಯವರ ಸಾವಿಗೆ ಈ ಕರಾಳ ಕಾನೂನು ಕಾರಣ ಎಂದು ಓವೈಸಿ ಆಪಾದಿಸಿದ್ದಾರೆ. ಆದಿವಾಸಿ ಹಕ್ಕುಗಳ ಹೋರಾಟಗಾರ ಸ್ವಾಮಿ 2021ರಲ್ಲಿ ನ್ಯಾಯಾಂಗ ಬಂಧನದಲ್ಲಿ ಮೃತಪಟ್ಟಿದ್ದರು. 2018ರ ಭೀಮಾ-ಕೊರೇಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ಯುಎಪಿಎ ಕಾನೂನಿನಡಿ ಅವರನ್ನು ಬಂಧಿಸಲಾಗಿತ್ತು. ಈ ಕಾನೂನನ್ನು ಚುನಾವಣೆ ವೇಳೆ ಆಕ್ಷೇಪಿಸಿದ್ದ ಓವೈಸಿ, ಈ ಕಾನೂನು ಜಾರಿಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA