ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳವಾಗಿದೆ. ಈ ನಡುವೆ ಬಿಸಿಲಿನ ತಾಪದಿಂದ ಬೇಸತ್ತ ಅಮೃತಸರದ ಐಐಎಮ್‍ನ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಎಸಿ ಅಳವಡಿಸುವಂತೆ ಆಗ್ರಹಿಸಿ ಮೆಸ್‍ನಲ್ಲಿ ವಿನೂತನವಾಗಿ ನಿದ್ರಿಸಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ 2 ದಿನಗಳಿಂದ ಅಮೃತಸರದಲ್ಲಿ ಗರಿಷ್ಠ ತಾಪಮಾನ 44.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ವಿದ್ಯಾರ್ಥಿಗಳ ಈ ಪ್ರತಿಭಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ವಿದ್ಯಾರ್ಥಿಗಳು ಕುರ್ಚಿ ಮೇಲೆ ಕುಳಿತು, ಟೇಬಲ್ ಮೇಲೆ ತಲೆ ಇರಿಸಿಕೊಂಡು ನಿದ್ರಿಸುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಹಾಸ್ಟೆಲ್ ನ ಸೌಲಭ್ಯಗಳನ್ನು ಒದಗಿಸುವ ಹಾಗೂ ನಿರ್ವಹಣೆಯ ವೈಫಲ್ಯದ ವಿರುದ್ಧ ಮೌನ ಪ್ರತಿಭಟನೆಯ ಸಂಕೇತವಾಗಿ ವಿದ್ಯಾರ್ಥಿಗಳು ಈ ರೀತಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷವೂ ವಿದ್ಯಾರ್ಥಿಗಳು ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಆದರೆ ಹಾಸ್ಟೆಲ್ ಅನ್ನು ತಾತ್ಕಾಲಿಕ ವಸತಿಗೃಹದಲ್ಲಿ ನಡೆಸಲಾಗುತ್ತಿದ್ದು, ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡರೆ ಈ ಸಮಸ್ಯೆ ಬಗೆಹರಿಸಬಹುದು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296