ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಭಾರೀ ಇಳಿಕೆ ಕಂಡಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ ಸುಮಾರು ಶೇ.40ರಷ್ಟು ಕುಸಿತ ಕಂಡಿದೆ.
ಹೌದು, ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರೀ ಇಳಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು.
ಕಳೆದ 2023–24ನೇ ಸಾಲಿನಲ್ಲಿ ಬರೋಬ್ಬರಿ 25 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಕೇವಲ 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಬಹುತೇಕ ಶೇ.40ರಷ್ಟು ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ.
ಈ ಬಾರಿಯ ದಾಖಲಾತಿ:
ನರ್ಸರಿ ಶಾಲೆ: 311.
ಪ್ರಾಥಮಿಕ ಶಾಲೆ: 3674.
ಪ್ರೌಢ ಶಾಲೆ: 6691.
ಪಿಯು ಕಾಲೇಜು: 4711.
ಡಿಗ್ರಿ ಕಾಲೇಜು: 1689.
ಪಿಜಿ ಕಾಲೇಜು: 98.
ಒಟ್ಟು ದಾಖಲಾತಿ: 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.
ಬಿಬಿಎಂಪಿ ತನ್ನ ವ್ಯಾಪ್ತಿಯ ಶಾಲೆಗಳನ್ನು ನಿರ್ವಹಣೆ ಮಾಡುವುದರಲ್ಲಿ ಎಡವಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯ. ಹಲವು ಭ್ರಷ್ಟಾಚಾರಗಳು ಹಾಗೂ ಮಕ್ಕಳಿಗೆ ಸಮಪರ್ಕವಾಗಿ ಮೂಲಭೂತ ಸೌಕರ್ಯ ಕೊಡುವುದರಲ್ಲಿ ಪಾಲಿಕೆ ಎಡವಿದೆ ಎನ್ನುವ ಆರೋಪವಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA