nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಬೆಲೆ ಹೆಚ್ಚಳ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ June 17, 2024

    ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಬೆಲೆ ಹೆಚ್ಚಳ: ಗೃಹ ಸಚಿವ ಪರಮೇಶ್ವರ

    By adminJune 17, 2024No Comments2 Mins Read
    parameshwr

    ಬೆಂಗಳೂರು: ಸಂಪನ್ಮೂಲ ಕ್ರೋಢಿಕರಿಸುವ ಉದ್ದೇಶದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

    ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದರು.
    ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು. ಬಿಜೆಪಿಯವರು ಪ್ರತಿಭಟನೆ ಮಾಡುವುದಕ್ಕು ಮುನ್ನ ಇದನ್ನು ಯೋಚಿಸಲಿ. ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ಬೆಲೆ ಹೆಚ್ಚಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೋಸ್ಕರ ಬೆಲೆ ಏರಿಕೆ ಮಾಡಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಬೇಸರಿಸಿದರು.

    ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟಿರುವ ವೀಡಿಯೋ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಇವತ್ತು ಒಂದು ಮಾತನ್ನು ಹೇಳುತ್ತೇನೆ. ಆ ಮಾತು ಶಾಶ್ವತವಾಗಿ ಉಳಿದು ಹೋಗುತ್ತದೆಯೇ? ಸಂದರ್ಭಕ್ಕೆ ಅನುಸಾರವಾಗಿ ಆಡಳಿತ ಮಾಡಬೇಕಲ್ಲವೇ? ಎಂದರು.

    ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯ ಕುರಿತು ಪ್ರತಿಕ್ರಿಯಿಸಿ, ತನಿಖೆ ಆಗುವವರೆಗೂ ಬಹಿರಂಗವಾಗಿ ಜನರ ಮುಂದೆ ಹೇಳಿಕೆ ನೀಡಲು ಆಗುವುದಿಲ್ಲ. ತನಿಖೆ ಆದ ನಂತರ ವರದಿ ಬರುತ್ತದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಹೇಳಿದ್ದೀನಿ, ಮುಖ್ಯಮಂತ್ರಿಯವರು ಹೇಳಿದ್ದಾರೆ. ಯಾರನ್ನೇ ರಕ್ಷಣೆ ಮಾಡುವುದಾಗಲಿ, ಯಾರ ಬಗ್ಗೆಯೂ ಮೃದು ಧೋರಣೆ ತೋರುವುದಾಗಲಿ ಇಲ್ಲ. ಯಾವ ಒತ್ತಡಕ್ಕೂ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಇನ್ ಸ್ಪೆಕ್ಟರ್ ಗಿರೀಶ್ ನಾಯ್ಕ್ ಮರುನೇಮಕ ಕುರಿತು ಮಾತನಾಡಿ, ಆಡಳಿತಾತ್ಮಕವಾಗಿ ಏನು ಅಗತ್ಯ ಇದೆಯೋ ಅದನ್ನು ಮಾಡುತ್ತೇವೆ. ಕೆಲ ಸಂದರ್ಭಗಳಲ್ಲಿ ತನಿಖಾಧಿಕಾರಿಗಳನ್ನು ಬದಲಾಯಿಸಿದ್ದೇವೆ. ಸಮರ್ಥವಾದ ಅಧಿಕಾರಿ ಯಾರು ಇದ್ದಾರೆ ಎಂಬುದನ್ನು ಪರಿಗಣಿಸಿ, ಇಲಾಖೆಯ ಹಿರಿಯ ಅಧಿಕಾರಿಗಳೇ ಮರುನೇಮಕ ಮಾಡಿಕೊಳ್ಳುತ್ತಾರೆ. ನಾವ್ಯಾರು ಸೂಚನೆ ಕೊಡುವುದಿಲ್ಲ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಬಿಬಿಎಂಪಿ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಪಕ್ಷದ ಅಧ್ಯಕ್ಷರು ಹೇಳಿದ್ದಾರೆ. ಮೀಸಲಾತಿ ಸಂಪೂರ್ಣ ಮಾಡಬೇಕು. ಮೀಸಲಾತಿ ಸರಿಯಿಲ್ಲ ಎಂದು ಯಾರಾದರು ಕೋರ್ಟ್‌ಗೆ ಹೋಗಬಹುದು. ಇದಾಗದಂತೆ ನೋಡಿಕೊಳ್ಳಬೇಕಿದೆ ಎಂದರು.

    ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವನೆ ಘಟನೆಯ ತಪ್ಪಿತಸ್ಥ ಅಧಿಕಾರಿಗಳ ವಜಾ ಮಾಡಬೇಕು ಎಂದು ಅಶೋಕ್ ಆಗ್ರಹಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರು ಅದರಲ್ಲಿ ನೇರವಾಗಿ ಭಾಗಿಯಾಗಿರುತ್ತಾರೆ ಅವರನ್ನು ಅಮಾನತು ಮಾಡಬೇಕಾಗುತ್ತದೆ. ಈಗಾಗಲೇ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ವಾಟರ್‌ಮೆನ್‌ನನ್ನು ಅಮಾನತು ಮಾಡಲಾಗಿದೆ. ತನಿಖೆಯಲ್ಲಿ ಹಿರಿಯ ಅಧಿಕಾರಿಗಳ ಲೋಪ ಕಂಡು ಬಂದರೆ ಅವರನ್ನು ಅಮಾನತು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.