ವಿಜಯಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ನಗರದ ಆಶ್ರಮ ರಸ್ತೆಯ ಪಿ&ಟಿ ಕ್ವಾರ್ಟರ್ಸಿನಲ್ಲಿ ನಡೆದಿದೆ.
ಮನೆಯವರು ಸೂಕ್ತ ಸಂದರ್ಭದಲ್ಲಿ ಎಚ್ಚೆತ್ತುಕೊಂಡ ಕಾರಣ ಭಾರೀ ಅನಾಹುತ ತಪ್ಪಿದೆ. ಪಿ&ಟಿ ಕ್ವಾರ್ಟರ್ಸ್ ನಿವಾಸಿ ಇಬ್ರಾಹಿಂ ಬಿದರಕುಂದಿ ಎನ್ನುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮೂಲತಃ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದವರಾಗಿದ್ದಾರೆ.
ಬಕ್ರೀದ್ ಹಬ್ಬದ ದಿನವೇ ಹಬ್ಬದಡುಗೆ ಮಾಡುವ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್’ಗೆ ಬೆಂಕಿ ಹತ್ತಿಕೊಂಡ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಶಾಮಕ ದಳದವರಿಗೆ, ಗ್ಯಾಸ್ ಏಜೆನ್ಸಿಯವರಿಗೆ ಮಾಹಿತಿ ರವಾನೆ ಮಾಡಿದ್ದು, ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಘಟನೆಯಲ್ಲಿ ಮನೆಯಲ್ಲಿನ ಅಡುಗೆ ಕೋಣೆಯಲ್ಲಿನ ವಸ್ತುಗಳಿಗೆ ಹಾನಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


