nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ
    Uncategorized June 18, 2024

    ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ

    By adminJune 18, 2024No Comments2 Mins Read
    siddharamayya

    ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ–ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್–ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.

    ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ. ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಪೆಟ್ರೋಲ್ ಡೀಸೆಲ್ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇರುವುದು ಗಮನಿಸಿ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.


    Provided by
    Provided by

    ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದರು. ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿಯವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು ಎಂದು ಪ್ರಶ್ನಿಸಿದರು?.

    ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತ ಶಿಫಾರಸು ಮಾಡಿದ್ದರೂ, ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ, ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ? ಬಿಜೆಪಿಯು ಬಡವರು, ದಲಿತರ ವಿರೋಧಿ ಧೋರಣೆ ಹೊಂದಿದೆ ಎಂದು ಅವರು ನುಡಿದರು.

    GST ಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ. ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ. ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ ಎಂದು ಸಿಎಂ ಹೇಳಿದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ…

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.