ಪಾವಗಡ : ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ವಿ.ವೆಂಕಟೇಶ್ ರವರ 48 ನೇ ಹುಟ್ಟು ಹಬ್ಬದ ಅಂಗವಾಗಿ ಸೋಮವಾರ ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಮಕ್ಕಳಿಗೆ ಶಾಲಾ ಬ್ಯಾಗ್, ಹಾಗೂ ಶಾಲಾ ಪರಿಕರಗಳನ್ನು ವಿತರಿಸಲಾಯಿತು.
ಪಾವಗಡ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವ ಜನಾನುರಾಗಿ, ಎಚ್ ವಿ. ವೆಂಕಟೇಶ್ ರವರಿಗೆ ಭಗವಂತ ಮತ್ತಷ್ಟು ಸೇವೆ ಮಾಡುವ ಶಕ್ತಿ ನೀಡಲಿ ಎಂದು ಹುಟ್ಟು ಹಬ್ಬವನ್ನು ಆಚರಿಸಿದ್ದು, ಸುಮಾರು 85 ಬಡ ಮಕ್ಕಳಿಗೆ ಶಾಲಾ ಪರಿಕರಗಳನ್ನು ವಿತರಿಸಿದ್ದೇವೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ತಿಳಿಸಿದರು.
ಈ ಸಂದರ್ಭದಲ್ಲಿ ASI ನಾರಾಯಣಸ್ವಾಮಿ,ಬೀದಿ ಬದಿ ಮಹಿಳಾ ವ್ಯಾಪಾರಸ್ಥರ ಅಧ್ಯಕ್ಷ ಶಶಿಕಲಾ, ಮೋಹನ್, ಅರವಿಂದ್ ಕುಮಾರ್, ಸಾಯಿ, ಇನ್ನು ಮುಂತಾದವರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA