ತುಮಕೂರು: ಚಿನ್ನೆನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನೆನಹಳ್ಳಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆಎನ್ ರಾಜಣ್ಣ ಭೇಟಿ ನೀಡಿ ಗ್ರಾಮದಲ್ಲಿ ಪರಿಶೀಲನೆ ನಡೆಸಿದರು.
ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವ ಪರಮೇಶ್ವರ್ ಹಾಗೂ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಓ ಪ್ರಭು, ಎಸ್ ಪಿ ಅಶೋಕ್ ಕೆವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.
ಕಳೆದ ಭಾನುವಾರ ಚಿನ್ನೆನಹಳ್ಳಿ ಗ್ರಾಮದ ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ರು, 250 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ರು.
ಅಲ್ಲದೇ ಕಳೆದ ಎರಡು ದಿನಗಳ ಹಿಂದೆ ವಾಂತಿ ಭೇದಿ ಕಾಣಿಸಿಕೊಂಡಿದ್ದ ವ್ಯಕ್ತಿಯೊಬ್ಬರಿಗೆ ಕಾಲಾರಾ ಖಾಯಿಲೆ ಪತ್ತೆ ಆಗಿತ್ತು. ಈ ಹಿನ್ನೆಲೆ ಚಿನ್ನೆನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA