ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ನಟ ದರ್ಶನ್, ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಾಗೂ ಮಳೆ–ಬೆಳೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು (Kodi Mutt Swamiji) ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.
ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಗಡಗಳು ಸಂಭವಿಸುತ್ತವೆ. ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು, ನಟ ದರ್ಶನ್ ಕೋಪವೇ ರೇಣುಕಾಸ್ವಾಮಿ ಕೊಲೆಗೂ ಕಾರಣವಾಗಿರೋ ವಿಷಯವನ್ನು ಕೋಡಿಮಠ ಶ್ರೀಗಳು ಈ ರೀತಿ ಬಿಚ್ಚಿಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


