ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.
ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವತಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ (19), ಮೃತ ವಿದ್ಯಾರ್ಥಿನಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ, ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವರ್ಷಿಣಿಗೆ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು. ಘಟನೆ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA