ಮುಳಬಾಗಿಲು: ಮಹಿಳೆಯರ ಸರ ಕದ್ದು ಪರಾರಿಯಾಗುತ್ತಿದ್ದ ಬೆಸ್ಕಾಂ ಸಿಬ್ಬಂದಿಯನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಆಂಧ್ರದಲ್ಲಿ ನಡೆದಿದೆ.
ತಾಲ್ಲೂಕಿನ ಬೈರಪೂರದ ಬಾಳಸಂದ್ರ ಬಿ.ಕೆ.ಲೋಕೇಶ್(27) ಬಂಧಿತ ವ್ಯಕ್ತಿಯಾಗಿದ್ದಾನೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪೆದ್ದಪಂಜಾಬಿ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೋಕೇಶ್ ಹಾಗೂ ಈತನ ಸ್ನೇಹಿತ ಕಿಶೋರ್ ಹಲ್ಲೆ ಮಾಡಿ ಸರ ಕಸಿದು ಪರಾರಿಯಾಗಿದ್ದಾರೆ.
ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಅಕ್ಕಪಕ್ಕದವರು ಸ್ಥಳಕ್ಕೆ ಬಂದು ಸುತ್ತುವರಿದು ಇಬ್ಬರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೆದ್ದಪಂಜಾಬಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಇದಲ್ಲದೆ ವಿದ್ಯುತ್ ಪರಿವರ್ತಕಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ತನಿಖೆ ಮುಂದುವರೆದಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy