ಚಂದ್ರಬಾಬು ನಾಯ್ಡು ಸರ್ಕಾರ ಹಿರಿಯ ನಾಗಕರಿಗೆ ಒಳ್ಳೆಯ ಸುದ್ದಿ ನೀಡಿದೆ. ಹಿರಿಯ ನಾಗರಿಕರಿಗೆ ಯಾವುದೇ ಒತ್ತಡವಿಲ್ಲದೆ ಆರಾಮದಾಯಕವಾಗಿ ತಿರುಪತಿ ತಿಮಪ್ಪನ ದರ್ಶನ ಪಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಹಿರಿಯ ನಾಗರಿಕರು ಸರತಿಸಾಲಿನಲ್ಲಿ ನಿಲ್ಲಬೇಕಾದ ಅಗತ್ಯವಿಲ್ಲ. ಅವರು ಯಾವುದೇ ಮೆಟ್ಟಿಲುಗಳನ್ನು ಹತ್ತದೇ ಸೇತುವೆ ಕೆಳಗೆ ಇರುವ ಗ್ಯಾಲರಿಯ ಮೂಲಕ ಪ್ರವೇಶಿಸಬಹುದಾಗಿದೆ. ತಿರುಪತಿಗೆ ಭೇಟಿ ನೀಡುವ ಹಿರಿಯ ನಾಗರಿಕರಿಗೆ ಹಲವು ಸೌಲಭ್ಯಗಳು ಲಭ್ಯವಿದೆ.
ವೆಂಕಟೇಶ್ವರ ದೇವರ ಉಚಿತ ದರ್ಶನಕ್ಕೆ ಎರಡು ವಿಶೇಷ ಸಮಯ ಸ್ಲಾಟ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.ಬೆಳಿಗ್ಗೆ 10 ಗಂಟೆಗೆ ಹಾಗೂ ಮಧ್ಯಾಹ್ನ 3 ಗಂಟೆಗೆ ವಿಶೇಷ ಸ್ಲಾಟ್‌ನಲ್ಲಿ ಹಿರಿಯ ನಾಗರಿಕರು ವೆಂಕಟೇಶ್ವರನ ದರುಶನ ಪಡೆಯಬಹುದಾಗಿದೆ.ಟಿಟಿಡಿ ನೀಡುತ್ತಿರುವ ಈ ಸೌಲಭ್ಯ ಪಡೆಯಲು ಹಿರಿಯ ನಾಗರಿಕರು ತಮ ಫೋಟೊ ಗುರುತಿನ ಚೀಟಿ (ಆಧಾರ್ ಅಥವಾ ಇತರೆ ದಾಖಲೆಗಳು) ಜೊತೆಗೆ ವಯಸ್ಸಿನ ಪುರಾವೆಯನ್ನು ಹಾಜರುಪಡಿಸಬೇಕು. ಈ ದಾಖಲೆಗಳನ್ನು ಎಸ್–1 ಕೌಂಟರ್‌ನಲ್ಲಿ ಸಲ್ಲಿಸಬೇಕು.
ಹೆಚ್ಚಿನ ವಿವರಣೆಗಳಿಗೆ ಟಿಟಿಡಿ ವಿಶೇಷ ಸಹಾಯವಾಣಿ ಸಂಖ್ಯೆ 08772277777 ಯಲ್ಲಿ ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA