ಮಡಿಕೇರಿ: ಅಂತರರಾಷ್ಟ್ರೀಯ 10 ನೇ ಯೋಗ ದಿನಾಚರಣೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮೂಲಕ ಪೂರ್ವಭಾವಿ ಸಭೆಯು ಬುಧವಾರ ನಡೆಯಿತು.
ಸಭೆಯಲ್ಲಿ ಜೂನ್, 21 ರಂದು ನಡೆಯುವ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕೋರಿದರು.
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನಿರ್ದೇಶನ ನೀಡಿದರು.
ಸ್ವಚ್ಚತೆ ಕಾಪಾಡುವುದು ಮತ್ತು ಕುಡಿಯುವ ನೀರು ಕಲ್ಪಿಸುವುದು ಮತ್ತಿತರ ಸಂಬಂಧ ನಗರಸಭೆ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು.
ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾ ದೇವಿ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಜೂನ್, 21 ರಂದು 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ವತಿಯಿಂದ ಹಾಗೂ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಆಚರಿಸಲಾಗುತ್ತಿದೆ ಎಂದರು.
ಜೂನ್ 20 ರಂದು ಜಾಥ: ‘ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ್, 20 ರಂದು ಬೆಳಗ್ಗೆ 8 ಗಂಟೆಗೆ ಯೋಗ ಜಾಥವನ್ನು ನಗರದ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ ಹಾಗೂ ಇಂದಿರಾಗಾಂಧಿ ವೃತ್ತ ಮೂಲಕ ಕಾವೇರಿ ಕಲಾಕ್ಷೇತ್ರದ ವರೆಗೆ ಯೋಗ ಜಾಥ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.’
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿದ್ಯಾರ್ಥಿಗಳಿಗೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಜೂನ್, 10 ರಿಂದ 20 ರವರೆಗೆ “ಯೋಗೋತ್ಸವ” ಕಾರ್ಯಕ್ರಮದ ಮೂಲಕ ಯೋಗ ತರಬೇತಿಯನ್ನು ಈಗಾಗಲೇ ಆಯೋಜಿಸಲಾಗಿದೆ ಎಂದು ಡಾ.ರೇಣುಕಾದೇವಿ ಅವರು ತಿಳಿಸಿದರು.
ಎನ್‍ಸಿಸಿ. ಘಟಕ ಮತ್ತು ಎನ್‍ಎಸ್‍ಎಸ್ ಘಟಕಗಳ ವಿದ್ಯಾರ್ಥಿಗಳಿಗೆ ಜೂನ್, 10 ರಿಂದ ಜೂನ್, 20 ರವರೆಗೆ “ಯೋಗೋತ್ಸವ” ಕಾರ್ಯಕ್ರಮದ ಮೂಲಕ ಯೋಗ ತರಬೇತಿ ನಿಡಲಾಗಿದೆ ಎಂದು ಜಿಲ್ಲಾ ಆಯೂಷ್ ಅಧಿಕಾರಿ ಅವರು ವಿವರಿಸಿದರು.
ಆಯುಷ್ ಆರೋಗ್ಯ ಕ್ಷೇಮ ಕೇಂದ್ರಗಳು ಹಾಗೂ ಆಯುಷ್ ಆಸ್ಪತ್ರೆಗಳಲ್ಲಿ ಆಯುಷ್ ಅರಿವು ಹಾಗೂ ಯೋಗ ಪ್ರಾತ್ಯಾಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಆಯುಷ್ ಆರೋಗ್ಯ ಕ್ಷೇಮಕೇಂದ್ರಗಳ ಯೋಗ ತರಬೇತಿದಾರರಿಂದ ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಯೋಗ ಕಾರ್ಯಕ್ರಮವನ್ನು ಜೂನ್, 10 ರಿಂದ 20 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಡಾ.ರೇಣುಕಾ ದೇವಿ ಅವರು ಮಾಹಿತಿ ನೀಡಿದರು.
ಪೌರಾಯುಕ್ತರಾದ ವಿಜಯ್ ಅವರು ಸ್ವಚ್ಚತೆಗೆ ಒತ್ತು ನೀಡಲಾಗುವುದು ಹಾಗೆಯೇ ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು. ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


