ನೂರಾರು ಕ್ವಿಂಟಾಲ್ ಅಕ್ಕಿ ಗೋಧಿ, ಪೌಷ್ಟಿಕ ಆಹಾರ ನಾಶವಾಗಿದೆ. ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಗೋಧಿ ಹುಳಗಳ ಪಾಲಾಗಿದೆ.
ಗದಗ ಜಿಲ್ಲೆಯ ಮುಂಡರಗಿ ಬಳಿ ಇರುವ ಗೋದಾಮಿನಲ್ಲಿ ಅಕ್ಕಿ ಗೋದಿ ಸಂಗ್ರಹಿಸಲಾಗಿತ್ತು. ಹೀಗೆ ಸಂಗ್ರಹಿಸಿಟ್ಟು ವರ್ಷಗಳೇ ಕಳೆದಿದ್ದು, ಯಾರಿಗೂ ಉಪಯೋಗವಾಗದೇ ಆಹಾರ ಪದಾರ್ಥ ಹಾಳಾಗಿದೆ. ಅಂಗನವಾಡಿ ಮೂಲಕ ಗರ್ಭಿಣಿಯರು, ಮಕ್ಕಳ ಹೊಟ್ಟೆ ಸೇರಬೇಕಾದ ಆಹಾರ ಹುಳುಗಳ ಪಾಲಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ 50 ಟನ್ ಕ್ಕೂ ಅಧಿಕ ಅಕ್ಕಿ ಹಾಗೂ ಗೋದಿ ನಾಶವಾಗಿದ್ದು, ಎಂಎಸ್ ಪಿಸಿ ಸಂಸ್ಥೆ ಮೂಲಕ ಮುಂಡರಗಿ, ಶಿರಹಟ್ಟಿ ತಾಲೂಕಿನ ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡಬೇಕಿದ್ದ ಆಹಾರ ಪದಾರ್ಥ ವ್ಯರ್ಥವಾಗಿದೆ.
ಇದೆಲ್ಲಾ ಆಗಿದ್ರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಾಗಲೀ, ಆಹಾರ ಇಲಾಖೆಯಾಗಲೀ ಯಾವುದೇ ಕ್ರಮ ವಹಿಸಿಲ್ಲ ಎಂಬುದು ಸಾರ್ವಜನಿಕರ ಸಿಟ್ಟಿಗೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


