ರಾಯಚೂರು: ಇಲ್ಲಿ ಪ್ರಸಿದ್ಧಯಾತ್ರಾ ಸ್ಥಳ ಮಂತ್ರಾಲಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕಟ್ಟಿಸಿದ ಛತ್ರಗಳು ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೋರುತ್ತಿವೆ. ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮಂತ್ರಾಲಯಕ್ಕೆ ಬರುವ ಭಕ್ತರಿಗೆ ತಂಗಲು 100 ಕೊಠಡಿಗಳ ಅತಿಥಿಗೃಹ ನಿರ್ಮಾಣಕ್ಕೆ 5 ಕೋಟಿ ರೂ.ಗಳನ್ನು ಸರ್ಕಾರ ನೀಡಿತ್ತು. ಈ ಹಣದಲ್ಲಿ 100 ಕೊಠಡಿಗಳ ಛತ್ರ ನಿರ್ಮಾಣ ಮಾಡಲಾಗಿತ್ತು. ಇವುಗಳನ್ನು ಉದ್ಘಾಟನೆ ಮಾಡಿ ಭಕ್ತರಿಗೆ ತಂಗಲು ಅವಕಾಶ ನೀಡಲಾಗಿತ್ತು.
ಆದರೆ ಉದ್ಘಾಟನೆಯಾದ ಎರಡು ವರ್ಷಗಳಾಗಿಲ್ಲವಾದರೂ ಇವು ಕಳಪೆ ಕಾಮಗಾರಿಯಿಂದ ಸೋರಲು ಆರಂಭವಾಗಿವೆ. ಕರ್ನಾಟಕ ಭವನದ ಕಟ್ಟಡ ಸೋರುತ್ತಿರುವುದು ಮಾತ್ರವಲ್ಲ, ಗೋಡೆಗಳಿಂದ ನೀರು ಜಿನುಗುತ್ತಿದೆ. ಇಲ್ಲಿ ಉಳಿಯಲು ಸಾಧ್ಯವಿಲ್ಲ ಎಂಬುದು ಭಕ್ತರ ಅಳಲು.
ಗೋಡೆಗಳು ಬಿರುಕುಬಿಟ್ಟಿವೆ. ಬೇಕಾಬಿಟ್ಟಿ ಅಳವಡಿಸಿದ ಗೀಸರ್, ಪ್ಲಗ್ ಗಳು ಕಿತ್ತು ಬಂದಿವೆ. ತಂಗಿದ ಭಕ್ತರು ಕರೆಂಟ್ ಶಾಕ್ ಭೀತಿಯಲ್ಲಿ ಇರಬೇಕಾದ ಸ್ಥಿತಿ ಇದೆ.
ಈಗ ಮಳೆ ಆರಂಭವಾಗಿದ್ದು ಸ್ಥಿತಿ ಇನ್ನೂ ಹದಗೆಟ್ಟಿದೆ. ಸಣ್ಣ ಮಳೆಯಾದರೂ ಸಾಕು ಕೊಠಡಿಗಳು ಸೋರುತ್ತಿವೆ. ಕಟ್ಟಡದ ಮುಂಭಾಗದ ಗೋಡೆಯೇ ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು ಆತಂಕ ಎದುರಾಗಿದೆ. ಕಳೆಪ ಕಾಮಗಾರಿ ಬಗ್ಗೆ ತನಿಖೆ ನಡೆದು ತಪ್ಪಿತಸ್ತರಿಗೆ ತಕ್ಕ ಶಾಸ್ತಿಯಾಗಲಿ ಎನ್ನುವುದು ಭಕ್ತರ ಬೇಡಿಕೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA