nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026
    Facebook Twitter Instagram
    ಟ್ರೆಂಡಿಂಗ್
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ಜಿಲ್ಲಾಡಳಿತ ನಿಮ್ಮ ಸಂಪೂರ್ಣ ನೆರವಿಗಿದೆ: ಜಿಲ್ಲಾಧಿಕಾರಿ
    ಜಿಲ್ಲಾ ಸುದ್ದಿ June 20, 2024

    ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ಜಿಲ್ಲಾಡಳಿತ ನಿಮ್ಮ ಸಂಪೂರ್ಣ ನೆರವಿಗಿದೆ: ಜಿಲ್ಲಾಧಿಕಾರಿ

    By adminJune 20, 2024No Comments2 Mins Read
    gangubai manakara

    ಕಾರವಾರ: ಎಲ್ಲಾ ಸಮಸ್ಯೆಗಳಿಗೆ ಸಾವು ಒಂದೇ ಅಂತಿಮ ಪರಿಹಾರವಲ್ಲ. ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಬಾರದು, ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

    ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ದೇಶದ ಬೆನ್ನೆಲುಬಾದ ರೈತರು ಯಾವುದೇ ಕಾರಣಗಳಿಗೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ 2019 ರಿಂದ 2023-24ನೇ ಸಾಲಿನ ವರೆಗೆ 43 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದು, ಮುಂಡಗೋಡ ತಾಲ್ಲೂಕಿನಲ್ಲಿ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಸಾಕಷ್ಟು ಸಂಕಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು ಎಂದರು.

    ಸರ್ಕಾರ ಮತ್ತು ಜಿಲ್ಲಾಡಳಿತ ಸದಾ , ರೈತರೊಂದಿಗಿದ್ದು, ರೈತರಿಗೆ ಯಾವುದೇ ಸಮಸ್ಯೆ ಎದುರಾದರೆ ಸ್ಥಳೀಯ ತಹಶೀಲ್ದಾರರಿಗೆ, ಜಿಲ್ಲಾಡಳಿತಕ್ಕೆ ಅಥವಾ ಜಿಲ್ಲಾ ಉಚಿತ ಸಹಾಯವಾಣಿ ದೂ.ಸಂ: 1950ಗೆ ಕರೆ ಮಾಡಿ ಗಮನಕ್ಕೆ ತಂದಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತ ಸದಾ ಸಿದ್ದವಿದೆ ಎಂದರು.

    ಬ್ಯಾಂಕ್ ಗಳು ರೈತರಿಗೆ ನೀಡಿರುವ ಸಾಲ ವಸೂಲಿಗೆ ಸಂಬಂಧಿಸಿದ0ತೆ ರೈತರು ಆರ್ಥಿಕವಾಗಿ ಸಬಲವಾಗುವರೆಗೂ ಸಾಲ ಪಾವತಿಸಲು ಒತ್ತಡ ಹಾಗೂ ಕಿರುಕುಳ ನೀಡದಂತೆ ಬ್ಯಾಂಕ್ ಗಳಿಗೆ ನಿರ್ದೇಶನ ನೀಡಲಾಗಿದ್ದು, ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಎದೆಗುಂದದೇ ಧೈರ್ಯವಾಗಿರುವಂತೆ ತಿಳಿಸಿದ ಜಿಲ್ಲಾಧಿಕಾರಿ, ರೈತರ ಕುಟುಂಬದ ಜೊತೆ ಸರ್ಕಾರ ಮತ್ತು ಜಿಲ್ಲಾಡಳಿತವಿದ್ದು, ಯಾವುದೇ ರೀತಿಯ ಸಹಾಯ ಬೇಕಾದಲ್ಲಿ ರೈತರು ಮುಕ್ತವಾಗಿ ತಹಶೀಲ್ದಾರ ಮೂಲಕ ಅರ್ಜಿ ಸಲ್ಲಿಸಿದ್ದಲ್ಲಿ ಆದ್ಯತೆ ಮೇಲೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದರು.

    ಈಗಾಗಲೇ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ವಿತರಿಸಲಾಗಿದ್ದು, ರೈತರು ಮರಣ ಹೊಂದಿದ ನಂತರ ರೈತನ ಪತ್ನಿಗೆ ಪ್ರತಿ ತಿಂಗಳು ರೂ. 2 ಸಾವಿರ ಮಾಸಾಶನ ಹಾಗೂ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳು ಕುಟುಂಬಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ತಲುಪಿಸಲಾಗಿದೆಯೇ ಎಂಬುದರ ಬಗ್ಗೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬ ಸದಸ್ಯರಿಂದ ಖಾತರಿಪಡಿಸಿಕೊಂಡ ಜಿಲ್ಲಾಧಿಕಾರಿ, ಪ್ರತಿ ಮಾಹೆಯಾನ ಮಾಸಾಶನ ರೈತರ ಪತ್ನಿಯ ಖಾತೆಗೆ ಜಮಾವಾಗಿರುವ ಬಗ್ಗೆ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಹಾಗೂ ಉಚಿತ ವಿದ್ಯಾಭ್ಯಾಸ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಮಾಡಿಕೊಳ್ಳುವ ಮೂಲಕ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳ ಲಾಭ ಪಡೆಯಬಹುದಾಗಿದೆ ಎಂದರು.

    ರೈತರು ಆತ್ಮಹತ್ಯೆಯ ಸಂದರ್ಭದಲ್ಲಿ ಪಂಚನಾಮೆ ವರದಿಯ ಜೊತೆ ರೈತರ ಕುಟುಂಬದ ಬೇಡಿಕೆ ವರದಿಯನ್ನು ಲಗತ್ತಿಸಿ ಸಲ್ಲಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳು ರೈತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ತಿಳಿಸಿದರು.

    ಇತ್ತೀಚಿಗೆ ಮಾನಸಿಕ ಖಿನತೆ, ಆರ್ಥಿಕ ಒತ್ತಡ, ಸಾಲಭಾದೆ ಮುಂತಾದ ಕಾರಣಗಳಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಷ್ಟಿಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದ “ಟೆಲಿ ಮನಸ್” ಉಚಿತ ಸಹಾಯವಾಣಿ ದೂ.ಸಂ:14416 ಗೆ ಕರೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ರೈತರು ಕೂಡ ಈ ದೂ.ಸಂಖ್ಯೆಗೆ ಕರೆ ಮಾಡಿ ತಮ್ಮ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ,ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಸದಸ್ಯರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ತುರುವೇಕೆರೆ: ದೇವರು ಬಂದಂತೆ ನಾಟಕವಾಡಿ ನೂತನ ದಲಿತ ದಂಪತಿಯನ್ನು ಅವಮಾನಿಸಿ ದೇವಾಲಯದಿಂದ ಹೊರಕಳಿಸಿದ ಘಟನೆಗೆ ಸಂಬಂಧಿಸಿದಂತೆ  ಕೃತ್ಯ ನಡೆಸಿದ ವ್ಯಕ್ತಿ…

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.