ನೀಟ್ (NEET) ಮತ್ತು ಯುಜಿಸಿ ನೆಟ್ (UGC-NET) ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ಕೇಂದ್ರ ಸರ್ಕಾರ ಸರಿಯಾಗಿ ಪರೀಕ್ಷೆಗಳನ್ನು ನಡೆಸಲು ಆಗದಷ್ಟು ಭ್ರಷ್ಟವಾಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಯುದ್ಧ ನಿಲ್ಲಿಸುವ ಪ್ರಧಾನಿಗಳಿಗೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಯಾಕೆ ತಡೆಯಲು ಆಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾನಸಿಕವಾಗಿ ಕುಸಿದಿದ್ದಾರೆ. ಸರ್ಕಾರವನ್ನು ಸಮರ್ಥವಾಗಿ ನಡೆಸಲು ಹೆಣಗಾಡುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ. ಶಿ
ಶಿಕ್ಷಣ ಸಂಸ್ಥೆಗಳನ್ನು ಆರ್ ಎಸ್ ಎಸ್ ಮತ್ತು ಬಿಜೆಪಿ ವಶಪಡಿಸಿಕೊಳ್ಳುತ್ತಿದ್ದು, ಅದನ್ನು ಬದಲಾಯಿಸದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಉಕ್ರೇನ್–ರಷ್ಯಾ ಯುದ್ಧ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ, ಆದರೆ ಅವರಿಗೆ ಪರೀಕ್ಷೆಯ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗಲಿಲ್ಲ ಅಥವಾ ತಡೆಯುವುದು ಬೇಕಾಗಿರಲಿಲ್ಲ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA