ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.
ಲೋಕಸಭೆ ಚುನಾವಣೆ ಮುಗಿದು NDA ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಜೂನ್ 24 ರಿಂದ ಮೊದಲ ಲೋಕಸಭಾ ಅಧಿವೇಶನ ಕೂಡ ನಡೆಯಲಿದೆ. ಈ ಬೆನ್ನಲ್ಲೇ ಭಾರೀ ಕುತೂಹಲ ಕೆರಳಿಸಿದ ಲೋಕಸಭಾ ಸ್ಪೀಕರ್ ಆಯ್ಕೆ ಇನ್ನೂ ತಣಿಯದಾಗಿದೆ. ಆದರೆ ಈ ನಡುವೆ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ಮಾಹಿತಿ ನೀಡಿದ್ದು, ಒಡಿಶಾ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ‘ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ ಭರ್ತೃಹರಿ ಮಹತಾಬ್ ಅವರನ್ನು ಸ್ಪೀಕರ್ ಆಗಿ ನೇಮಿಸಲು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಹಂಗಾಮಿ ಸ್ಪೀಕರ್ ಸಹಾಯಕ್ಕೆ ಸುರೇಶ್ ಕೋಡಿಕುನ್ನಿಲ್, ತಾಳಿಕ್ಕೋಟ್ಟೈ ರಾಜುತೇವರ್ ಬಾಲು, ರಾಧಾ ಮೋಹನ್ ಸಿಂಗ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಸುದೀಪ್ ಬಂದೋಪಾಧ್ಯಾಯ ಇವರುಗಳನ್ನು ನೇಮಕ ಮಾಡಲಾಗಿದೆ. ಹೊಸ ಸ್ಪೀಕರ್ ಆಯ್ಕೆವರೆಗೂ ಕಾರ್ಯ ನಿರ್ವಹಣೆ ಮಾಡಲಿದ್ದಾರೆ ಎಂದು ರಿಜಿಜು ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA