nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೈಬರ್ ಅಪರಾಧ: ಜನಸಾಮಾನ್ಯರು ಮುಂಜಾಗ್ರತೆ ವಹಿಸಿದರೆ ವಂಚನೆ ತಡೆಯಬಹುದು: ಡಾ.ವಿಕ್ರಮ ಅಮಟೆ
    ರಾಜ್ಯ ಸುದ್ದಿ June 22, 2024

    ಸೈಬರ್ ಅಪರಾಧ: ಜನಸಾಮಾನ್ಯರು ಮುಂಜಾಗ್ರತೆ ವಹಿಸಿದರೆ ವಂಚನೆ ತಡೆಯಬಹುದು: ಡಾ.ವಿಕ್ರಮ ಅಮಟೆ

    By adminJune 22, 2024No Comments2 Mins Read
    presss

    ಆಧುನಿಕ ತಂತ್ರಜ್ಞಾನ ಬಳಸಿ ಆನ್ ಲೈನ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಆಮಿಷಗಳನ್ನು ಒಡ್ಡಿ ವಂಚನೆ ಮಾಡುತ್ತಿರುವ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಮುಂಜಾಗ್ರತೆ ವಹಿಸುವ ಮೂಲಕ ವಂಚನೆಗೊಳಗಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ ಅಮಟೆ ತಿಳಿಸಿದರು.

    ಅವರು ಇಂದು ಚಿಕ್ಕಮಗಳೂರು ಪ್ರಸ್‌ಕ್ಲಬ್‌ನಲ್ಲಿ ಏರ್ಪಡಿಸಲಾಗಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.

    ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ವಿದ್ಯಾವಂತ ಸುಶಿಕ್ಷಿತರೇ ಹೆಚ್ಚು ವಂಚನೆಗೊಳಗಾಗುತ್ತಿದ್ದಾರೆ, ದೊಡ್ಡ ಜಾಲವನ್ನು ಹೊಂದಿರುವ ವಂಚಕರ ಜಾಲವು ಇಲ್ಲಸಲ್ಲದ ಆಮಿಷ ಒಡ್ಡಿ ವಿವಿಧ ರೀತಿಯಲ್ಲಿ ವಂಚನೆ ಮಾಡುತ್ತಿದ್ದು, ಯಾರೂ ಕೂಡ ಅಪರಿಚಿತರೊಂದಿಗೆ ತಮ್ಮ ವಯಕ್ತಿಕ ಮಾಹಿತಿಗಳನ್ನು ನೀಡಬಾರದು ಎಂದು ಮನವಿ ಮಾಡಿದರು.

    ಮೂರು ಪ್ರಕರಣಗಳಲ್ಲಿ ಸೈಬರ್ ಅಪರಾಧಗಳು ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ವೈರಲ್ ಮಾಡಿ ಬ್ಲಾಕ್‌ಮೇಲ್ ರೂಪದಲ್ಲಿ ವಂಚನೆ ಮಾಡಲಾಗುತ್ತಿದೆ. ಬ್ಯಾಂಕ್ ಹಾಗೂ ಇತರ ವ್ಯವಹಾರಗಳಲ್ಲಿ ವಯಕ್ತಿಕ ಮಾಹಿತಿ ಪಡೆದುಕೊಂಡು ತಂತ್ರಜ್ಞಾನ ಬಳಸಿ ಹಣ ಅಪಹರಿಸುವ ಮೂಲಕ ವಂಚನೆ ಮಾಡಲಾಗುತ್ತಿದೆ, ಡಿಜಿಟಲ್ ಅರೆಸ್ಟ್ ಎಂಬ ಸುಳ್ಳು ಮಾಹಿತಿ ನೀಡಿ ಹಣ ಸುಲಿಗೆ ಮಾಡಲಾಗುತ್ತಿದೆ. ಈ ಬಗ್ಗೆ ನಾಗರಿಕರು ಎಚ್ಚರವಹಿಸಬೇಕಾಗಿದೆ ಎಂದರು.

    2೦೦3ರಲ್ಲಿ ಮಾಹಿತಿ ತಂತ್ರಜ್ಞಾನ ಜಾರಿಗೆ ಬಂದಿದ್ದು, ಅದರ ಆಧಾರದಲ್ಲಿ ರಾಜ್ಯ ಸರ್ಕಾರ ಪ್ರತೀ ಪೊಲೀಸ್ ಠಾಣೆಯಲ್ಲಿ ಇಬ್ಬರಿಗೆ ಸೈಬರ್ ಅಪರಾಧಗಳ ಬಗ್ಗೆ ತರಬೇತಿ ನೀಡಲಾಗಿದೆ. ಪ್ರತೀ ಜಿಲ್ಲೆಯಲ್ಲಿ ಸೈಬರ್ ಅಪರಾಧಕ್ಕಾಗಿಯೇ ಪ್ರತ್ಯೇಕ ಪೊಲೀಸ್ ಠಾಣೆ ತೆರೆಯಲಾಗಿದ್ದು ಡಿವೈಎಸ್‌ಪಿ ಹಂತದ ಅಧಿಕಾರಿಗೆ ತನಿಖಾಧಿಕಾರಿಯಾಗಿ ನಿಯೋಜಿಸಲಾಗಿದೆ, ಇದೀಗ ಸರ್ಕಾರ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮಟ್ಟದ ಅಧಿಕಾರಿಯನ್ನು ಮೇಲುಸ್ತುವಾರಿಗಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

    ಯಾವುದೇ ವ್ಯಕ್ತಿ ಅಥವಾ ಯಾವುದೇ ಸ್ಥಳದಲ್ಲಿ ಸೈಬರ್ ಅಪರಾಧದಲ್ಲಿ ತೊಂದರೆಗೊಳಗಾದವರು ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಇದಕ್ಕಾಗಿ ಪ್ರತ್ಯೇಕವಾಗಿ ಟ್ರೋಲ್‌ಫ್ರೀ ಮೊಬೈಲ್ ಸಂಖ್ಯೆ ೧೯೩೦ ಯನ್ನು ನಿಗಧಿಪಡಿಸಿದ್ದು, ಯಾವುದೇ ಸ್ಥಳದಿಂದ ಈ ಸಂಖ್ಯೆಗೆ ದೂರವಾಣಿ ಕರೆ ಮಾಡಿದರೆ ಎನ್‌ಸಿಸಿಆರ್‌ಪಿ( ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟ್ ಪೋರ್ಟಲ್) ಇಲ್ಲಿಗೆ ಮಾಹಿತಿ ರವಾನೆಯಾಗಿ ಅಲ್ಲಿಂದ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ರವಾನೆಯಾಗಲಿದೆ ಎಂದು ವಿವರಿಸಿದರು.

    ಈ ಮಾಹಿತಿ ಆಧರಿಸಿ ಆಯಾ ಪೊಲೀಸ್ ಠಾಣೆಗಳಿಂದ ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಅಥವಾ ಸಂಬಂಧಪಟ್ಟ ಜಾಲತಾಣ ಸಂಸ್ಥೆಗಳಿಗೆ ಮಾಹಿತಿ ನೀಡಿ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಬಹುದು ಮತ್ತು ವಂಚನೆ ಜಾಲತಾಣಗಳ ಆಪ್‌ಗಳು ಮೊಬೈಲ್ನ ಸಂಖ್ಯೆಗಳನ್ನು ಬ್ಲಾಕ್‌ಮಾಡುವ ಮೂಲಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದೆಂದು ಹೇಳಿದರು.

    ಈ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಸೈಬರ್ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಗವಿರಾಜ್ ಭಾಗವಹಿಸಿದ್ದರು, ಅಧ್ಯಕ್ಷತೆಯನ್ನು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ರಾಜೇಶ್ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ತಾರಾನಾಥ್ ಉಪಸ್ಥಿತರಿದ್ದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ತುಮಕೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಕೇಂದ್ರ…

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.