ಪಾವಗಡ: ಕೃಷಿ ಬೆಳೆಗಳಲ್ಲಿ ಬಿತ್ತನೆ ಹಂತದಿಂದ ಕಟಾವು ಹಂತದ ವರೆಗೆ ಬರ, ಆಲಿಕಲ್ಲುಮಳೆ, ಭೂಕುಸಿತ ಮುಂತಾದ ಪ್ರಕೃತಿ ವಿಕೋಪಗಳಿಂದ ಇಳುವರಿ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವ ಸಲುವಾಗಿ 2024 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್ ತಿಳಿಸಿದರು.
ಸದರಿ ಯೋಜನೆ ಇಡೀ ವಿಮಾ ಪರಿಹಾರ ಮೊತ್ತವನ್ನು ಪಡೆಯಲು ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ರೈತರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳು ದಾಖಲಾಗುವುದು ಕಡ್ಡಾಯವಾಗಿರುತ್ತದೆ ಆದ್ದರಿಂದ ಪ್ರಸ್ತುತ ಹಂಗಾಮಿನ ಬೆಳೆ ವಿಮೆ ಯೋಜನೆಯಲ್ಲಿ ವಿಮೆಗೆ ಒಳಪಡುವ ವಿಮಾ ಘಟಕಗಳು ಬೆಳೆಗಳು ಪ್ರೀಮಿಯಂ ಮೊತ್ತ ಬೆಳೆವಾರು ವಿಮಾ ಮೊತ್ತ ಹಾಗೂ ಅಂತಿಮ ದಿನಾಂಕಗಳ ಬಗ್ಗೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮ ಮಾಡಿ ರೈತರ ತಮ್ಮ ಮೊಬೈಲ್ ಮುಖಾಂತರ ತಮ್ಮ ಜಮೀನಿನಲ್ಲಿರುವ ಬೆಳೆಗಳನ್ನು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲು ಮಾಡುವುದರ ಕುರಿತು ದಿನಾಂಕ 24-06-2024 ರಿಂದ 28-06- 2024 ರ ವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೈತರಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ತರಬೇತಿಯನ್ನು ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುತ್ತದೆ ಎಂದು ಅವರು ತಿಳಿಸಿದರು.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿಗಳಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆಯವಂತೆ ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್ ರವರು ಕೋರಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA