ತುಮಕೂರು: ಜಿಲ್ಲೆಯ ತಿಪಟೂರು ನಗರದ ಮಾರನಗೆರೆ ಕೊರಚರ ಕಾಲೋನಿ 16ನೇ ವಾರ್ಡ್‌ನಲ್ಲಿ ಮಳೆ ಬಂದರೆ ಚರಂಡಿ ನೀರು ಮುಂದೆ ಹೋಗದಂತೆ ಕಟ್ಟಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.
ಇದನ್ನು ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲಿಸಿ, ಚರಂಡಿಯಲ್ಲಿ ನಿಂತಿರುವ ಹೂಳನ್ನು ತೆಗೆದು ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಿದ್ದು, ಈ ಪ್ರದೇಶದಲ್ಲಿರುವ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಇನ್ನೂ ಸಾರ್ವಜನಿಕರು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA