ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಬಹಿರ್ದೆಸೆಗೆ ತೆರಳಿದ್ದಾಗ ಆಕೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಪ್ರಕರಣ ಮುಚ್ಚಿ ಹಾಕಲು ಆಕೆಯನ್ನು ಕೊಲೆಗೈಯಲು ಯತ್ನಿಸಿದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಂಡಸಾಗರ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಬಸವರಾಜ ಎಂದು ಗುರುತಿಸಲಾಗಿದೆ. ಈತ ಶಾಲಾ ಬಾಲಕಿಯೋರ್ವಳು ಬಹಿರ್ದೆಸೆಗೆಂದು ಹೋಗಿದ್ದಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ಅಕ್ಕಪಕ್ಕದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಏಕಾಏಕಿ ಹಿಂದಿನಿಂದ ಬಂದು ಬಾಲಕಿಯನ್ನು ಗಟ್ಟಿಯಾಗಿ ಹಿಡಿದು ಬಾಯಿಗೆ ಬಟ್ಟೆಯನ್ನು ತುರುಕಿದ್ದಾನೆ. ಆತನ ಮುಷ್ಠಿಯಿಂದ ಬಿಡಿಸಿಕೊಳ್ಳಲು ಆಗದಿದ್ದಾಗ ಬಾಲಕಿಯ ಅಸಹಾಯಕತೆಯನ್ನೇ ದುರುಪಯೋಗ ಮಾಡಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಸಿಕ್ಕಿ ಬೀಳುವ ಭೀತಿಯಲ್ಲಿ ಕಾಮುಕ ಬಸವರಾಜ, ಅಸ್ವಸ್ಥಳಾಗಿದ್ದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಆದರೆ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದಿದ್ದು, ನಡೆದಿದ್ದ ಎಲ್ಲ ಘಟನೆಯನ್ನು ಪೋಷಕರಿಗೆ ತಿಳಿಸಿದ್ದಾಳೆ.
ತಕ್ಷಣ ಪೋಷಕರು ಸಂತ್ರಸ್ತೆ ಜತೆಗೂಡಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಲಿಂಗಸಗೂರು ಪೊಲೀಸರು ಕೃತ್ಯ ನಡೆದ ಕೆಲವೇ ಗಂಟೆಯಲ್ಲಿ ಆರೋಪಿ ಬಸವರಾಜ ದ್ಯಾವಪ್ಪ ಆದಾಪುರನನ್ನು ಬಂಧಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


