ನಟಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಭಾನುವಾರ ವಿವಾಹವಾಗಿದೆ.ಇತ್ತೀಚೆಗಷ್ಟೇ ನಟಿಯ ಕುಟುಂಬಕ್ಕೆ ಅವರ ಮದುವೆಯಲ್ಲಿ ಸಂತೋಷವಿಲ್ಲ ಎಂಬ ವದಂತಿಗಳು ಹಬ್ಬಿದ್ದವು.
ಈ ವರದಿಗಳಿಗೆ ಅಂತ್ಯ ಹಾಡುವ ಮೂಲಕ, ಶತ್ರುಘ್ನ ಸಿನ್ಹಾ ಇತ್ತೀಚೆಗೆ ಜಹೀರ್ ಮನೆಯಲ್ಲಿ ಕಾಣಿಸಿಕೊಂಡರು. ಮದುವೆ ಕಾರ್ಯಕ್ರಮದ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಟಿ ಸೋನಾಕ್ಷಿ ಸಿನ್ಹಾ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಜತೆ ಮದುವೆ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದಿದೆ, ಸೋನಾಕ್ಷಿ ಸಿನ್ಹಾ ಮದುವೆಯ ಬಳಿಕ ಜಹೀರ್ ಇಕ್ಬಾಲ್ ಅವರ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.
ಇದೀಗ ಈ ಬಗ್ಗೆ ಜಹೀರ್ ಅವರ ತಂದೆ, ಉದ್ಯಮಿ ಇಟ್ಬಾಲ್ ರತ್ನಾಸಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಜಹೀರ್ ಮದುವೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ಅಡಿಯಲ್ಲಿ ನಡೆಯಲಿದೆ. ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರಗೊಳ್ಳುವುದಿಲ್ಲ. ಈ ಮದುವೆ ಹಿಂದೂ ಅಥವಾ ಮುಸ್ಲಿಂ ಆಚರಣೆಗಳನ್ನು ಹೊಂದಿರುವುದಿಲ್ಲ ಮತ್ತು ವಿಭಿನ್ನವಾಗಿರಲಿದೆ ಎಂದಿದ್ದಾರೆ. ನಟಿ ಸೋನಾಕ್ಷಿ ಮತ್ತು ಇಕ್ಬಾಲ್ 2022ರಲ್ಲಿ ಬಿಡುಗಡೆಯಾದ ‘ಡಬಲ್ ಎಕ್ಸ್‌ಎಲ್’ ಚಿತ್ರದಲ್ಲಿ ನಟಿಸಿದ್ದರು. ಅಂದಿನಿಂದ ಈ ಇಬ್ಬರು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA