ತುಮಕೂರು: ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತಿಘಟ್ಟ ಗ್ರಾಮದ “ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ” ನೂತನ ಅಧ್ಯಕ್ಷರಾಗಿ ಆಯ್ಕೆಯಾದ “ನಟರಾಜು.ಎಸ್” ರವರನ್ನು ಅಭಿನಂದಿಸಲಾಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವನ್ನು ನಟರಾಜು.ಎಸ್ ಅವರು ತಮ್ಮ ಅಧ್ಯಕ್ಷತೆಯಲ್ಲಿ ಇನ್ನೂ ಉನ್ನತ ಮಟ್ಟಕ್ಕೆ ಕರೆದುಕೊಂಡು ಹೋಗುವಂತಾಗಲಿ ಎಂದು ಇದೇ ವೇಳೆ ಹಾರೈಸಲಾಯಿತು.
ಈ ವೇಳೆ ಮತಿಘಟ್ಟ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಹೇಶ್, ಎಸ್.ಡಿ.ಎಂ.ಸಿ(ಜಿ.ಎಚ್.ಪಿ.ಎಸ್)ಯ ಅಧ್ಯಕ್ಷರಾದ ಚಂದ್ರಶೇಖರಯ್ಯ.ಎಸ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಿರಂಜರ್ ಮೂರ್ತಿ, ಜೈ ಕರ್ನಾಟಕ ವಾಹನ ಮಾಲೀಕರು ಮತ್ತು ಚಾಲಕರ ಸಂಘ (ರಿ) ರಕ್ತ ದಾನ ಜೀವ ದಾನ ಸಂಘದ ತುಮಕೂರು ಘಟಕದ ಜಿಲ್ಲಾಧ್ಯಕ್ಷರಾದ ಸುಬ್ಬು ಎನ್ ಮೂರ್ತಿ ಹಾಗೂ ಊರಿನ ಪ್ರಮುಖರು ಮತ್ತು ಆಜುಬಾಜಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy