ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಡಿ ಬಾಸ್ ಗ್ಯಾಂಗ್ ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಒಂದೇ ಕಡೆ ಇಡುವುದು ಸುರಕ್ಷಿತವಲ್ಲ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಆರೋಪಿಗಳ ಜೈಲು ಬದಲಾವಣೆಗೆ ಪೊಲೀಸರು ನ್ಯಾಯಾಲಯದಲ್ಲಿ ಕೇಳಿದ್ದರು.
ಈ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಇದಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಯಾಕೆ ಆರೋಪಿಗಳ ವರ್ಗಾವಣೆ ಅಗತ್ಯ ಎನ್ನುವುದರ ಕುರಿತು ವಿವರಣೆ ನೀಡಿದ್ದು, ಎ8 ರವಿ, ಎ15 ಕಾರ್ತಿಕ್, ಎ16 ಕೇಶವ ಮೂರ್ತಿ, ಎ17 ನಿಖಿಲ್ ನಾಯಕ್ ನನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿದೆ.
ರೇಣುಕಾಸ್ವಾಮಿ ಮೃತದೇಹ ಸುಮ್ಮನಹಳ್ಳಿ ಬಳಿಯ ಕಾಲುವೆ ಬಳಿ ಪತ್ತೆಯಾಗಿದ್ದು, ಆ ಸಂದರ್ಭದಲ್ಲಿ ನಟ ದರ್ಶನ್ನಿಂದ 30 ಲಕ್ಷ ರೂ ಹಣ ಪಡೆದು ತಾವೇ ಕೊಲೆ ಮಾಡಿದ್ದೆಂದು ನಾಲ್ವರು ಆರೋಪಿಗಳು ಸರೆಂಡರ್ ಆಗಿದ್ದು, ಈ ಕುರಿತು ಪೊಲೀಸರು ವಿಚಾರಣೆ ನಡೆಸಿದಾಗ ನಟ ದರ್ಶನ್ ಸೇರಿ ಡಿ ಗ್ಯಾಂಗ್ ನಲ್ಲಿದ್ದ ಈ ಘಟನೆಗೆ ಸಂಬಂಧಪಟ್ಟ ಎಲ್ಲರ ಹೆಸರನ್ನು ಹೇಳಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA