ತನ್ನ ವೃತ್ತಿಯ ವಿಡಿಯೋ ವೈರಲ್ ಆದ ಕಾರಣಕ್ಕೆ ಮನನೊಂದು ಹಿರಿಯ ತ್ಯಾಜ್ಯ ಸಂಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ.
ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಇನ್ನಿತರ ತ್ಯಾಜ್ಯಗಳನ್ನು ತನ್ನ ಕೈಗಾಡಿಯಲ್ಲಿ ಸಂಗ್ರಹಿಸುತ್ತಿದ್ದ ಆ ಹಿರಿಯ ತ್ಯಾಜ್ಯ ಸಂಗ್ರಾಹಕ, ತನ್ನ ಜೀವನೋಪಾಯಕ್ಕಾಗಿ ಆ ತ್ಯಾಜ್ಯಗಳನ್ನು ಮಾರಾಟ ಮಾಡಿಕೊಂಡಿದ್ದರು ಎನ್ನಲಾಗಿದೆ. ಲೌಹಾತ್ ಗ್ರಾಮದ ಕೆಲವು ಯುವಕರು ಆತನ ವೃತ್ತಿಯನ್ನು ಅಣಕವಾಡಿ, ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು ಎನ್ನಲಾಗಿದೆ.
ಈ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಆ ಹಿರಿಯ ವ್ಯಕ್ತಿಯನ್ನು ಅನೇಕರು ಗುರುತಿಸಲು ಪ್ರಾರಂಭಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, “ತ್ಯಾಜ್ಯ ಸಂಗ್ರಾಹಕನ ಮೃತದೇಹ ಹೆದ್ದಾರಿ ಬಳಿಯ ಮರವೊಂದರಲ್ಲಿ ನೇತಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA