18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದರು.
ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಲೆಂದು ತಮ್ಮ ಸೀಟಿನಿಂದ ಮೇಲೇಳುತ್ತಿದ್ದಂತೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂವಿಧಾನ ಪುಸ್ತಕ ಕೈಯಲ್ಲಿ ಹಿಡಿದು ಸಂವಿಧಾನ ಸುದೀರ್ಘವಾಗಿ ಬಾಳಲಿ ಎಂದು ಘೋಷಣೆ ಕೂಗಿರುವ ಘಟನೆ ನಡೆಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಕ್ಕಾಗಿ ತಮ್ಮ ಸೀಟಿನಿಂದ ಎದ್ದೇಳುತ್ತಿದ್ದಂತೆ ಸಂವಿಧಾನ ಪುಸ್ತಕ ಹಿಡಿದು ಎದ್ದು ನಿಂತ ರಾಹುಲ್ ಗಾಂಧಿ, ನಾವು ಸಂವಿಧಾನವನ್ನು ರಕ್ಷಿಸುತ್ತೇವೆ. ಯಾವುದೇ ಕಾರಣಕ್ಕೂ ಸಂವಿಧಾನಕ್ಕೆ ಅಪಮಾನವಾಗುವುದಕ್ಕೆ ಇಂಡಿಯಾ ಒಕ್ಕೂಟ ಬಿಡುವುದಿಲ್ಲ ಎಂದು ಕೂಗಿ ಕೂಗಿ ಹೇಳಿದರು.
ಸಂವಿಧಾನ ಪುಸ್ತಕ ತೋರಿಸುತ್ತಾ ಮಾತನ್ನು ಆರಂಭಿಸಿದ್ದ ರಾಹುಲ್, ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದು, ಇದು ಎಂದಿಗೂ ಸ್ವೀಕಾರಾರ್ಹವಲ್ಲ ಎಂದು ಕಿಡಿಕಾರಿದರು. ಆದರೆ ಮೋದಿ ರಾಹುಲ್ ಕಡೆ ಕಿಡಿ ನೋಟ ಬೀರಿ ತಮ್ಮ ಪಕ್ಷದವರತ್ತ ನೋಡಿ ನಸು ನಕ್ಕು ಕ್ಯಾರೇ ಎನ್ನದೇ ಪ್ರಮಾಣ ವಚನ ಸ್ವೀಕರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA