ಸಕಲೇಶಪುರ: ಪಟ್ಲಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ ನಡೆದಿರುವ ಆರೋಪದ ಮೇಲೆ ಇದೀಗ ಆರೋಪಿಗಳಾದ ಜೀಪು ಚಾಲಕರ ಬಂಧನವಾಗಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪ್ರವಾಸಿತಾಣವಾದ ಪಟ್ಲಬೆಟ್ಟ ಬಳಿ ಜೀಪ್ ಹಾಗೂ ಪಿಕ್ ಅಪ್ ವಾಹನ ಚಾಲಕರು ಜೂ.23 ರಂದು ಬೈಕ್ ನಲ್ಲಿ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದು, ಈ ಕುರಿತು ದೂರನ್ನು ನೀಡಲಾಗಿತ್ತು. ಇದೀಗ ಜೀಪು ಚಾಲಕರ ಬಂಧನವಾಗಿದೆ.
ಬೈಕ್ ನಲ್ಲಿ ಬಂದಿದ್ದ ಪ್ರವಾಸಿಗರು ಪಟ್ಲಬೆಟ್ಟಕ್ಕೆ ಭೇಟಿ ನೀಡಿ ವಾಪಸ್ ಬರುವಾಗ ಅಡ್ಡಗಟ್ಟಿ ಹಲ್ಲೆ ನಡೆಸಲಾಗಿರುವ ವೀಡಿಯೋವೊಂದು ವೈರಲ್ ಆಗಿತ್ತು. ಜೀಪುಗಳನ್ನು ಬಾಡಿಗೆ ಪಡೆಯದೇ ತಮ್ಮ ಬೈಕ್ ನಲ್ಲಿ ಹೋಗಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಈ ಘಟನೆ ಕುರಿತು ದಕ್ಷಿಣ ಕನ್ನಡ ಮೂಲದ ಪ್ರವಾಸಿಗರಾದ ಭುವಿತ್ ಪೂಜಾರಿ ದೂರನ್ನು ನೀಡಿದ್ದರು. ಗಗನ್, ಕಿರಣ್, ನಿಶಾಂತ್, ಮದನ್ ಎಂಬುವವರ ಮೇಲೆ ಯಸಳೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


