ಹಸಿ ಬೆಳ್ಳುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಣೆ ಸಾಧ್ಯವಿದೆಯಂತೆ. ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಗ್ಯಾಸ್ ಸಮಸ್ಯೆ ನಿವಾರಣೆಯಾಗುತ್ತದೆ. ಪ್ರತಿದಿನ ಬೆಳಗ್ಗೆ ಹಸಿ ಬೆಳ್ಳುಳ್ಳಿಯನ್ನು ಜಗಿಯುವ ಅಭ್ಯಾಸ ಮಾಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ಹಲವಾರು ಆರೋಗ್ಯಕರ ಲಾಭಗಳಾಗಲಿವೆ.
ಬೆಳ್ಳುಳ್ಳಿಯಲ್ಲಿರುವ ‘ಅಲಿಸಿನ್’ ಎಂಬ ಅಂಶ ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬೆಳ್ಳುಳ್ಳಿ ರಂಜಕ, ಸತು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳನ್ನು ಹೊಂದಿದೆ.
ಪ್ರತಿದಿನ ಬೆಳಗ್ಗೆ ಬೆಳ್ಳಳ್ಳಿಯ ಒಂದು ಎಸಳನ್ನು ಜಗಿಯುವ ಅಭ್ಯಾಸ ಮಾಡೊಕೊಳ್ಳಬೇಕು. ಇದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಪರಿಹಾರವಾಗುತ್ತವೆ. ಹಸಿ ಬೆಳ್ಳುಳ್ಳಿ ಉತ್ತಮ ಜೀರ್ಣಕ್ರಿಯೆಗೆ ಹಲವು ರೀತಿಯಲ್ಲಿ ಉಪಯುಕ್ತವಾಗಿದೆ.
ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಗ್ಯಾಸ್, ಹೊಟ್ಟೆಯುಬ್ಬರ, ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಕರುಳಿನ ಚಲನೆಯನ್ನು ಸರಾಗಗೊಳಿಸುತ್ತದೆ. ಬೆಳ್ಳುಳ್ಳಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಅವು ಹೊಟ್ಟೆಯಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಮಾಡುತ್ತವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA