ಚಿಕನ್ ಪೀಸ್ ಗಂಟಲಲ್ಲಿ ಸಿಕ್ಕಿ ಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ತೆಲಂಗಾಣ ರಾಜಧಾನಿ ಹೈದರಾಬಾದ್ ನ ಶಾದ್ ನಗರದಲ್ಲಿ ನಡೆದಿದೆ.
ಅಣ್ಣಾರಾಮ್ ಗ್ರಾಮದ ಶ್ರೀಕಾಂತ್(39 ವರ್ಷ) ಮೃತಪಟ್ಟ ಯುವಕನಾಗಿದ್ದು, ಚಿಕನ್ ಬಿರಿಯಾನಿ ತಿನ್ನುವಾಗ ಚಿಕನ್ ಪೀಸ್ ಗಂಟಲಲ್ಲಿ ಸಿಕ್ಕಿಕೊಂಡಿದ್ದು, ಇದರಿಂದ ಉಸಿರುಗಟ್ಟಿ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಬಿರಿಯಾನಿ ತಿನ್ನುವಾಗ ಚಿಕನ್ ಪೀಸ್ ವೊಂದು ಗಂಟಲಲ್ಲಿ ಸಿಕ್ಕಿಕೊಂಡಿದೆ. ಇದರಿಂದಾಗಿ ಸಂಕಟ ತಡೆಯಲಾರದೇ ಆತ ಹೊರಗೆ ಎದ್ದು ಬಂದಿದ್ದಾನೆ.. ಅದನ್ನು ಉಗುಳಲು ಎಷ್ಟು ಪ್ರಯತ್ನಿಸಿದರೂ ಆಗಿಲ್ಲ. ಅಷ್ಟಲ್ಲಿ ಉಸಿರುಗಟ್ಟಿ ಬಾರ್ ಮುಂದೆಯೇ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.
ಅತಿಯಾದ ಮದ್ಯ ಸೇವನೆಯಿಂದ ಸಾವನ್ನಪ್ಪಿರಬಹುದೆಂದು ಮೊದಲು ಶಂಕಿಸಲಾಗಿತ್ತು.. ಆದ್ರೆ ಗಂಟಲಲ್ಲಿ ಚಿಕನ್ ಸಿಕ್ಕಿ ಹಾಕಿಕೊಂಡಿದ್ದರಿಂದಲೇ ಸಾವನ್ನಪ್ಪಿರೋದು ಅಂತ ವೈದ್ಯರು ಪರೀಕ್ಷೆ ಮಾಡಿದ ನಂತರ ಗೊತ್ತಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಗಂಟಲಲ್ಲಿ ಚಿಕನ್ ಪೀಸ್ ಇರುವುದು ಗೊತ್ತಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA