ರಸ್ತೆ ಅಪಘಾತವೊಂದರಲ್ಲಿ ನಟ ದರ್ಶನ್ ಅಭಿಮಾನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ನಡೆದಿದೆ.
ಟಿ.ನರಸೀಪುರ ಪಟ್ಟಣದ ವಿನಾಯಕ ಕಾಲೋನಿಯಲ್ಲಿ ವಾಸವಿದ್ದ ದರ್ಶನ್ ಅಭಿಮಾನಿ ರವಿ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ರವಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.
ಮೃತ ಧರಿಸಿದ್ದ ಟಿ ಶರ್ಟ್ ಮೇಲೆ ದರ್ಶನ್ ಅವರ ಫೋಟೋ ಇರುವುದು ಕಂಡುಬಂದಿದೆ.. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.
ಮೃತದೇಹವನ್ನು ಟಿ. ನರಸೀಪುರ ಸಾರ್ವಜನಿಕರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದು ಮೃತ ಸಂಬಂಧಿಕರು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


