ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣ ಸಂಬಂಧ ಅಶ್ಲೀಲ ವಿಡಿಯೊ ಪೆನ್ ಡ್ರೈವ್ ಹಂಚಿಕೆ ಆರೋಪದಡಿ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ತನಿಖಾಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 354(ಎ)–ಲೈಂಗಿಕ ಕಿರುಕುಳ, 354 (ಡಿ) ಮಹಿಳೆಯ ನಿರಾಸಕ್ತಿಯ ಹೊರತಾಗಿಯೂ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿರುವುದು, 354 ಬಿ-ಮಹಿಳೆ ಮೇಲೆ ಆಕ್ರಮಣ ಹಾಗೂ ಮಾಹಿತಿ, 506-ಜೀವ ಬೆದರಿಕೆ ಹಾಗೂ ಐಟಿ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಇಲ್ಲಿನ ಹೊಳೆನರಸೀಪುರ, ಕೆ.ಆರ್.ನಗರ, ಸಿಐಡಿ ಸೈಬರ್ ಠಾಣೆಯಲ್ಲಿ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದೆ. ನಾಲ್ಕನೇ ಪ್ರಕರಣದಲ್ಲಿ ಪ್ರಜ್ವಲ್ ಮೊದಲ ಆರೋಪಿಯಾದರೆ, ಪ್ರೀತಂ ಗೌಡ ನಾಲ್ಕನೇ ಆರೋಪಿಯಾಗಿದ್ದಾರೆ. ಹೀಗಾಗಿ, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಸಹ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


