ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಕಾರಣವೇನು ಗೊತ್ತೆ ? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಿಗ್ಗೆವರೆಗೆ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಭಾರೀ ಮಳೆಯಾಗುತ್ತಿದೆ.
ನಾಳೆ ಭಾರೀ ಮಳೆ ಸುರಿಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ.
ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


