nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಡಳಿತ ಸುಧಾರಣಾ ಆಯೋಗದಿಂದ ಇದುವರೆಗೆ 5039 ಶಿಫಾರಸ್ಸು : ಆರ್.ವಿ.ದೇಶಪಾಂಡೆ
    ಜಿಲ್ಲಾ ಸುದ್ದಿ June 27, 2024

    ಆಡಳಿತ ಸುಧಾರಣಾ ಆಯೋಗದಿಂದ ಇದುವರೆಗೆ 5039 ಶಿಫಾರಸ್ಸು : ಆರ್.ವಿ.ದೇಶಪಾಂಡೆ

    By adminJune 27, 2024No Comments3 Mins Read
    rv deshpande

    ಕಾರವಾರ: ಎರಡನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಆಡಳಿತದಲ್ಲಿ ಪಾರದರ್ಶಕತೆ, ಸರಳತೆ ಹಾಗೂ ಸಕಾಲದಲ್ಲಿ ನಾಗರಿಕ ಸೇವೆಗಳನ್ನು ಕಡಿಮೆ ಖರ್ಚಿನಲ್ಲಿ ಒದಗಿಸಲು ಮಾಡಬೇಕಾದ ಸುಧಾರಣೆಗಳನ್ನು ಹಾಗೂ ಇಲಾಖೆಗಳ ಒಟ್ಟಾರೆ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಆದ್ಯತೆಯನ್ನು ನೀಡಿದ್ದು, ಜನವರಿ 2024 ರ ಅಂತ್ಯಕ್ಕೆ 39 ಇಲಾಖೆಗಳಿಗೆ ಸಂಬ0ಧಿಸಿದ 7 ವರದಿಗಳನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿದ್ದು, ಈ ವರದಿಗಳಲ್ಲಿ ಒಟ್ಟು 5039 ಶಿಫಾರಸ್ಸುಗಳನ್ನು ಮಾಡಲಾಗಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.

    ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಆಡಳಿತ ಸುಧಾರಣೆಯ ಬಗ್ಗೆ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದರು.


    Provided by
    Provided by

    ಮೇ 2024 ರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆ.ಸು) ಯವರೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸುಗಳ ಅನುಷ್ಠಾನÀದ ಬಗ್ಗೆ ಮಾಸಿಕ ಸಭೆಗಳಲ್ಲಿಯೂ ಸಹ ಪರಿಶೀಲಿಸಲು ತಿಳಿಸಲಾಗಿತ್ತು. ಇದರ ಪರಿಣಾಮವಾಗಿ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಲ್ಲಿ ಗಣನೀಯ ಪ್ರಗತಿಯಾಗಿದೆ ಎಂದರು.

    ಆಯೋಗವು ಜೂನ್ -2021ರಲ್ಲಿ ಕಂದಾಯ ಇಲಾಖೆ, ಆಹಾರ, ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಸಾರಿಗೆ ಇಲಾಖೆಗಳಿಗೆ ಸಂಬ0ಧಿಸಿದ0ತೆ ಮೊದಲನೆಯ ವರದಿಯಲ್ಲಿ ಕ್ರಮವಾಗಿ 528, 111 ಮತ್ತು 217 ಸೇರಿದಂತೆ ಒಟ್ಟು-856 ಶಿಫಾರಸ್ಸುಗಳನ್ನು ಮಾಡಿದೆ. ಕಳೆದ 3 ವರ್ಷಗಳಲ್ಲಿ ಇಲಾಖೆಗಳ ಶಿಫಾರಸ್ಸುಗಳ ಅನುಷ್ಠಾನ ಕುರಿತಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಸಂಬ0ಧಿಸಿದ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ ಹಾಗೂ ಸಿಆಸುಇ (ಆಸು) ಇಲಾಖೆಯ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರುಗಳೊಂದಿಗೆ ಕೂಲಂಕುಷವಾಗಿ ಪರಿಶೀಲಿಸಲಾಗಿದೆ.

    ಅದರಂತೆ ಕಂದಾಯ ಇಲಾಖೆ ಕುರಿತಂತೆ ನೀಡಿರುವ 528 ಶಿಫಾರಸ್ಸುಗಳಲ್ಲಿ 205 ಅನುಷ್ಠಾನಗೊಳಿಸಿದ್ದು, 76 ಅನುಷ್ಠಾನ ಹಂತದಲ್ಲಿ ಹಾಗೂ 247  ಪರಿಶೀಲನೆಯಲ್ಲಿವೆ. ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ಸಂಬ0ಧಿಸಿದಂತೆ 111 ಶಿಫಾರಸ್ಸುಗಳಲ್ಲಿ 37 ಅನುಷ್ಠಾನಗೊಳಿಸಿದ್ದು, 18 ಅನುಷ್ಠಾನ ಹಂತದಲ್ಲಿ ಹಾಗೂ 56 ಶಿಫಾರಸ್ಸುಗಳು ಪರಿಶೀಲನೆಯಲ್ಲಿವೆ. ಸಾರಿಗೆ ಇಲಾಖೆಯಲ್ಲಿನ 217 ಶಿಫಾರಸ್ಸುಗಳಲ್ಲಿ 132 ಅನುಷ್ಠಾನಗೊಳಿಸಿದ್ದು, 4 ಅನುಷ್ಠಾನ ಹಂತದಲ್ಲಿ ಹಾಗೂ 81 ಶಿಫಾರಸ್ಸುಗಳು ಪರಿಶೀಲನೆಯಲ್ಲಿವೆ. ಈ ಇಲಾಖೆಗಳಲ್ಲಿ ಅನುಷ್ಠಾನದ ಹಂತದಲ್ಲಿರುವ 98 ಶಿಫಾರಸ್ಸುಗಳನ್ನು ಒಂದು ತಿಂಗಳ ಒಳಗೆ ಅನುಷ್ಠಾನಗೊಳಿಸಲು ಹಾಗೂ ಪರಿಶೀಲನೆಯಲ್ಲಿರುವ 165 ಶಿಫಾರಸ್ಸುಗಳನ್ನು ತಕ್ಷಣವೇ ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಂಡು ಆಯೋಗಕ್ಕೆ ವರದಿ ಮಾಡಲು ಸೂಚಿಸಲಾಗಿದೆ ಎಂದರು.

    ಆಯೋಗದ 2 ನೇ ವರದಿಯಲ್ಲಿ ಪ್ರಸ್ತಾಪಿತವಾಗಿರುವ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಒಳಾಡಳಿತ ಇಲಾಖೆ ಹಾಗೂ ಆಯೋಗದ 3ನೇ ವರದಿಯಲ್ಲಿ ಪ್ರಸ್ತಾಪಿತವಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮತ್ತು ಇಂಧನ ಇಲಾಖೆಗಳಿಗೆ ಸಂಬ0ಧಿಸಿದ ಶಿಫಾರಸ್ಸುಗಳನ್ನು ಅನುಷ್ಟಾನಗೊಳಿಸುವ ಕುರಿತು ಜುಲೈ-2024 ರಲ್ಲಿ ಸಭೆಗಳನ್ನು ನಿಗಧಿಪಡಿಸಲಾಗಿದ್ದು, ಈ ಸಭೆಗಳಲ್ಲಿ ಶಿಫಾರಸ್ಸುಗಳನ್ನು ತ್ವರಿತವಾಗಿ ಅನುಷ್ಟಾನಗೊಳಿಸುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಮುಂದಿನ 3 ತಿಂಗಳಲ್ಲಿ ಎಲ್ಲಾ ಇಲಾಖೆಗಳಲ್ಲಿ ಬಾಕಿ ಉಳಿದ ಶಿಫಾರಸ್ಸುಗಳನ್ನು ಅನುಷ್ಟಾನಗೊಳಿಸುವ ಕುರಿತು ಸಭೆಗಳನ್ನು ನಡೆಸಿ ಕಾಲ ಮಿತಿಯನ್ನು ನಿಗದಿಪಡಿಸಲಾಗುವುದು ಎಂದರು.

    ಆಯೋಗವು ನಾಗರಿಕ ಸೇವೆಗಳನ್ನು ಸಂಪರ್ಕರಹಿತ, ಮತ್ತು ನಗದುರಹಿತ ವ್ಯವಸ್ಥೆಯ ಮೂಲಕ ನಿಗದಿತ ಸಮಯಕ್ಕೆ ಪರಿಣಾಮಕಾರಿಯಾಗಿ ಸೇವಾ ವಿತರಣೆಯನ್ನು ಖಚಿತಪಡಿಸುವುದು. ಹಾಗೂ ಜಾರಿಯಲ್ಲಿರುವ ಎಲ್ಲಾ ಸೇವೆಗಳನ್ನು ಎಂಡ್–ಟು–ಎಂಡ್ ಆನ್‌’ಲೈನ್ ಸೇವೆಗಳಾಗಿ ಪರಿವರ್ತಿಸುವ ಕುರಿತಂತೆ ಶಿಫಾರಸ್ಸು ಮಾಡಲು ಮತ್ತು ಸಿಬ್ಬಂದಿಯ ಮೇಲಿನ ಕೆಲಸದ ಹೊರೆಯನ್ನು ಕಡಿಮೆ ಮಾಡಲು ಎಲ್ಲಾ ಹಂತಗಳಲ್ಲಿ ಇ–ಆಫೀಸ್ ಸೇವೆಗಳಂತಹ ತಂತ್ರಜ್ಞಾನದ ಬಳಕೆ, ಕಡತಗಳ ತ್ವರಿತ ವಿಲೇವಾರಿಗಾಗಿ ಕಡತ ಚಲನೆಯನ್ನು 3 ಅಥವಾ 4 ಹಂತಕ್ಕೆ ಸರಳೀಕರಿಸಲು ಪರಿಶೀಲನೆ ನಡೆಸುತ್ತಿದೆ ಎಂದರು.

    ಮುಂಚೂಣಿ ಸೇವಾ ವಿತರಣಾ ಕಚೇರಿಗಳಾದ ಅಟಲ್ ಜೀ ಜನಸ್ನೇಹಿ ಕೇಂದ್ರಗಳು (ಎಜೆಎಸ್‌ ಕೆ), ಗ್ರಾಮ ಪಂಚಾಯಿತಿ ರೈತ ಸಂಪರ್ಕ ಕೇಂದ್ರ (ಆರ್.ಎಸ್.ಕೆ), ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಹೆಚ್‌ ಸಿ), ಪೊಲೀಸ್ ಠಾಣೆ ಇವೇ ಮೊದಲಾದವುಗಳನ್ನು ಬಲಪಡಿಸುವುದು. ಮತ್ತು ಈ ಕಚೇರಿಗಳಲ್ಲಿ ನಿರ್ಣಾಯಕ ಹುದ್ದೆಗಳನ್ನು ಮತ್ತು ಕ್ಷೇತ್ರ ಮಟ್ಟದಲ್ಲಿ ತಾಂತ್ರಿಕ ಹುದ್ದೆಗಳನ್ನು ಕಾಲಕ್ರಮದಲ್ಲಿ ಭರ್ತಿ ಮಾಡುವ ಕುರಿತಂತೆ ಹಾಗೂ ಆದಾಯದ ಸಂಪನ್ಮೂಲಗಳನ್ನು ಹೆಚ್ಚಿಸುವುದು ಮತ್ತು ಅಗತ್ಯವಿರುವಲ್ಲಿ ಶುಲ್ಕಗಳು, ದಂಡಗಳು, ಇತ್ಯಾದಿಗಳನ್ನು ಪರಿಷ್ಕರಿಸುವ ಬಗ್ಗೆ ಶಿಫಾರಸ್ಸು ಮಾಡಲು ಪರಿಶೀಲನೆ ನಡೆಸಿದೆ ಎಂದರು.

    ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕಚೇರಿಗಳಿಗೆ ಹೆಚ್ಚಿನ ಆಡಳಿತಾತ್ಮಕ ಮತ್ತು ಆರ್ಥಿಕ ಅಧಿಕಾರಗಳ ಪ್ರತ್ಯಾಯೋಜನೆ, ಸೇವಾ ವಿತರಣೆಯನ್ನು ಸುಧಾರಿಸಲು ಖಾಲಿ ಇರುವ ಲಿಪಿಕ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಾಗಿ ಪರಿವರ್ತನೆ, ಕೆಲಸದ ಹೊರೆಯನ್ನು ಪರಿಗಣಿಸಿ ಸಿಬ್ಬಂದಿಯ ಮರು ನಿಯೋಜನೆ (redeployment) ಮಾಡಲು ಹೆಚ್ಚಿನ ಅವಕಾಶಗಳಿದ್ದು, ಕೆಲಸದ ಹೊರೆಯ ಆಧಾರದ ಮೇಲೆ ಸಿಬ್ಬಂದಿಯ ಮರು ನಿಯೋಜನೆ ಮಾಡುವ ಕಾರ್ಯವನ್ನು ತ್ವರಿತಗೊಳಿಸುವುದು. ಹಾಗೂ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳನ್ನು ವಿಲೀನಗೊಳಿಸುವ ಸಾಧ್ಯತೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು ಎಂದರು.

    ಜಿಲ್ಲೆಯಲ್ಲಿ ಅರಣ್ಯ, ಸಾರಿಗೆ, ಗ್ರಾಮೀಣಾಭಿವದ್ದಿ ಮತ್ತು ಪಂಚಾಯತ್ ರಾಜ್, ಗಣಿ ಮತ್ತು ಭೂ ವಿಜ್ಞಾನ, ಲೋಕೋಪಯೋಗಿ, ಕೆ.ಆರ್.ಐ.ಡಿ.ಎಲ್, ನಿರ್ಮಿತಿ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಕೈಗಾರಿಕೆ, ಪ್ರವಾಸೋದ್ಯಮ, ಹೆಸ್ಕಾಂ, ನಗರ ಸ್ಥಳೀಯ ಸಂಸ್ಥೆಗಳು, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಅಧಿಕಾರಿಗಳಿಂದ ಮತ್ತು ಸಾರ್ವಜನಿಕರಿಂದ ಸಲಹೆಗಳನ್ನು ಸ್ವೀಕರಿಸಲಾಯಿತು.

    ಸಭೆಯಲ್ಲಿ ಶಾಸಕರಾದ ಭೀಮಣ್ಣ ನಾಯ್ಕ್, ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಆಡಳಿತ ಸುಧಾರಣಾ ಆಯೋಗದ ಸಲಹೆಗಾರ ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಎಫ್‌ ಓ ರವಿಶಂಕರ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.