ಬಿಜೆಪಿಯ ಹಿರಿಯ ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡ್ವಾಣಿ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ರಾಮ ಮಂದಿರ ಹೋರಾಟದಲ್ಲಿ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದ ಅಡ್ವಾಣಿ, ಇತ್ತೀಚೆಗೆ ನಡೆದ ರಾಮಮಂದಿರ ಉದ್ಘಾಟನೆಗೂ ಆಗಮಿಸಿರಲಿಲ್ಲ.
96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಡ್ವಾಣಿ ಅವರ ತಪಾಸಣೆ ಮಾಡುತ್ತಿರುವ ಏಮ್ಸ್ ವೈದ್ಯರು ಕಾರಣವನ್ನು ಬಹಿರಂಗಪಡಿಸಿಲ್ಲ. ಮೂತ್ರಶಾಸ್ತ್ರದ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಪ್ರಸ್ತುತ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಅಡ್ವಾಣಿಯವರು ವೃದ್ಧಾಪ್ಯ ವಿಭಾಗದ ತಜ್ಞರ ಅಡಿಯಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಕೀಯ, ದೇಶದ ಆಡಳಿತ, ದೇಶಕ್ಕಾಗಿ ಅವರ ಅಘಮ್ಯ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗ ಭಾರತ ರತ್ನವನ್ನು ನೀಡಿ ಅಡ್ವಾಣಿಯವರನ್ನು ಗೌರವಿಸಲಾಗಿದೆ. 2024ರ ಮಾರ್ಚ್ 30 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿರುವ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA