ತುರುವೇಕೆರೆ: ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು.
ಪಟ್ಟಣದ ವೈ ಟಿ ರಸ್ತೆಯ ಗಣಪತಿ ಪೆಂಡಾಲ್ನಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಏಳು ಜನ ಸ್ಪಂದನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ ಇದು ಎಂಟನೇ ಕಾರ್ಯಕ್ರಮ ಪ್ರಮುಖವಾಗಿ ಕೃಷಿ ಇಲಾಖೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಈ ಬಾರಿ ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.
ನಮ್ಮ ಜಿಲ್ಲೆಯಲ್ಲಿ ಕಳೆದ ವರ್ಷದ ಬೆಳೆ ವಿಮೆ 70 ಕೋಟಿ ರೂಪಾಯಿಗಳನ್ನು ಈಗಾಗಲೇ ರೈತರ ಖಾತೆಗಳಿಗೆ ಜಮೆ ಮಾಡಲಾಗಿದ್ದು ಕಳೆದ ಸಾಲಿನಲ್ಲಿ ಕೇವಲ 70000 ರೈತರು ಬೆಳೆ ವಿಮೆ ಮಾಡಿಸಿದ್ದಾರೆ ಈ ವರ್ಷ ಕೃಷಿ ಇಲಾಖೆಯು ಆಂದೋಲನವನ್ನು ಕೈಗೊಂಡಿದ್ದು ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ, ಆ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆಯ ಬಗ್ಗೆ ಅರಿವು ಮೂಡಿಸುವ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ ಎಂದರು.
ರೈತರು ಅವರು ನೀಡಿರುವ ವೇಳಾಪಟ್ಟಿಯಂತೆ ಬೆಳೆ ವಿಮೆ ನೋಂದಣಿ ಮಾಡಿಸಿ ಎಲ್ಲಾ ರೈತರುಗಳು ತಮ್ಮ ಮೊಬೈಲ್ಗಳಲ್ಲಿ ಬೆಳೆಯ ಸಮೀಕ್ಷೆಯನ್ನು ತಾವೇ ಮಾಡಿಕೊಳ್ಳಬಹುದು. ಎಂದು ತಿಳಿಸಿ ಅಧಿಕಾರಿಗಳೊಂದಿಗೆ ಸ್ಪಂದಿಸಿ ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ರೈತರಲ್ಲಿ ಮನವಿ ಮಾಡಿದರು.
ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಈ ಸಾಲಿನಲ್ಲಿ ಕಡಿಮೆ ಫಲಿತಾಂಶ ಬಂದಿದ್ದು ಇದರಲ್ಲಿ ಶೇಕಡಾವಾರು ಕಡಿಮೆಯಾಗಿದೆ ಇದರಿಂದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಿ ಎಂದು ಡಿಡಿಪಿ ಐ. ಸಭೆ ನಡೆಸಿ ಅವರಿಗೆ ಸೂಚನೆ ನೀಡಲಾಗಿದೆ. ಈ ಸಾಲಿನಲ್ಲಿ ಒಳ್ಳೆಯ ಫಲಿತಾಂಶ ಬರುವಂತೆ ಶ್ರಮವಹಿಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದರು.
ತಾಲೂಕು ಕಚೇರಿಯ ಕಡತಗಳು ಶೀಘ್ರ ವಿಲೇವಾರಿಯಾಗದೆ ಮತ್ತು ಕೆಲಸಗಳು ತುಂಬಾ ನಿಧಾನವಾಗಿ ನಡೆಯುತ್ತಿರುವುದರಿಂದ ಸಿಬ್ಬಂದಿಗಳಿಗೆ ಚುರುಕು ಮುಟ್ಟಿಸಿ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಿ ಶೀಘ್ರವಾಗಿ ಕಡೆತಗಳನ್ನು ವಿಲೇವಾರಿ ಮಾಡಿ ರೈತರು ಹಾಗೂ ಸಾರ್ವಜನಿಕರು ಕಚೇರಿಗೆ ಬಂದರೆ ಅವರನ್ನು ಅಲೆಸದಂತೆ ತಾಲೂಕು ಕಚೇರಿಯ ನೌಕರರಿಗೆ ಎಚ್ಚರಿಕೆ ಕೊಟ್ಟರು.
ಪೌತಿ ಖಾತೆ ವಿಲೇವಾರಿಯ ಬಗ್ಗೆ ಸರಿಯಾದ ವೇಳೆಯಲ್ಲಿ ವಿಲೇವಾರಿ ಮಾಡಿ ಇಲ್ಲವಾದಲ್ಲಿ ನೀವೇ ಜವಾಬ್ದಾರಿಗಳಾಗಿರುತ್ತೀರಿ ಎಂದು ಪೌತಿ ಖಾತೆ ವಿಲೇವಾರಿ ಆಂದೋಲನ ಮಾಡಿ ಸರಿಯಾದ ನಿರ್ವಹಣೆ ಮಾಡಿ ಎಂದು ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ತಾಕೀತು ಮಾಡಿ ಪ್ರತಿ ಗ್ರಾಮ ಪಂಚಾಯತ್ ಪಿಡಿಒ ಹಾಗೂ ವಾಟರ್ ಮ್ಯಾನ್ ಗಳಿಗೆ ಎಲ್ಲಾ ಟ್ಯಾಂಕ್ ಗಳನ್ನು ಸ್ವಚ್ಛವಾಗಿಡಲು ಸೂಚಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಹೇಳಿ ಕುಡಿಯುವ ನೀರಿನ ಬಗ್ಗೆ ದೂರುಗಳು ಬಂದರೆ ನೀವೇ ಜವಾಬ್ದಾರಿಗಳಾಗಿರುತ್ತೀರಿ. ಸಾರ್ವಜನಿಕರಿಗೆ ಸ್ಪಂದಿಸದಿದ್ದಲ್ಲಿ ಶಿಸ್ತುಕ್ರಮ ಜರಗಿಸಲಾಗುವುದು ಎಂದು ಹೇಳಿದರು.
ಶಾಸಕ ಎಂ.ಟಿ.ಕೃಷ್ಣಪ್ಪನವರು ಮಾತನಾಡಿ, ನಮ್ಮ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಕೆಲಸವನ್ನು ಚೆನ್ನಾಗಿ ನಿರ್ವಹಿಸುತ್ತಿದ್ದು ತಮ್ಮ ಹಿರಿಯ ಅಧಿಕಾರಿಗಳ ತಂಡದೊಂದಿಗೆ ತಾಲೂಕಿಗೆ ಬಂದು ರೈತರ ಹಾಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ಕೇಳಲು ಬಂದಿದ್ದಾರೆ ನಿಮ್ಮ ಯಾವುದೇ ಅಹವಾಲುಗಳಿದ್ದರೂ ಸಹ ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಿ ಹಾಗೆ ಕಂದಾಯ ಇಲಾಖೆಯ ನೌಕರರು ರೈತರನ್ನು ಅನವಶ್ಯವಾಗಿ ಕಚೇರಿಗೆ ಆಲಿಸುವುದನ್ನು ನಾನು ನೋಡಿದ್ದೇನೆ ಇದಕ್ಕೆ ನೀವೇ ಜವಾಬ್ದಾರಿಗಳಾಗುತ್ತೀರಿ. ಯಾವುದೇ ಕಾರಣಕ್ಕೂ ಸುಖ ಸುಮ್ಮನೆ ಅವರನ್ನು ಆಲೆಸುವುದನ್ನು ಬಿಟ್ಟು ಸರಿಯಾದ ಸಮಯದಲ್ಲಿ ಕೆಲಸವನ್ನು ನಿರ್ವಹಿಸಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಮಳಿಗೆಗಳನ್ನು ತೆರೆಯಲಾಗಿತ್ತು ಅದರಲ್ಲಿ ಆರೋಗ್ಯ ಇಲಾಖೆಯು ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವೈ ಎಂ ರೇಣು ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವರಾಜಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಚಿದಾನಂದ್, ಅಂಜನ್ ಕುಮಾರ್, ಯಜಮಾನ ಮಹೇಶ್, ಎನ್.ಆರ್ ಸುರೇಶ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು, ಬಿ ಇ ಓ ಸೋಮಶೇಖರ್, ಆಡಿಷನಲ್ ಎಸ್.ಪಿ. ಖಾದರ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA